ಬಳೆ ಮಾರುವ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟಿಸಿದ ವ್ಯಕ್ತಿಗೆ ಪಾಕ್ ನಂಟು: ಮಧ್ಯಪ್ರದೇಶದ ಸಚಿವ

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದಾತ್ಮಕ ಸಂದೇಶಗಳನ್ನು ಹರಡಿದ ಮತ್ತು ಇಂದೋರ್ ನಗರದಲ್ಲಿ ಗಲಭೆಯನ್ನು ಪ್ರಚೋದಿಸಲು ಸಂಚು ರೂಪಿಸಿದ ಆರೋಪದ ಮೇಲೆ ಅಲ್ತಮಾಶ್ ಖಾನ್ ಎಂಬಾತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಳೆ ಮಾರುವ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟಿಸಿದ ವ್ಯಕ್ತಿಗೆ ಪಾಕ್ ನಂಟು: ಮಧ್ಯಪ್ರದೇಶದ ಸಚಿವ
ನರೋತ್ತಮ್ ಮಿಶ್ರಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 30, 2021 | 7:36 PM

ಭೋಪಾಲ್:  ಇಂದೋರ್‌ನಲ್ಲಿ ನಡೆದ ಬಳೆ ಮಾರಾಟಗಾರನ ಮೇಲಿನ ಹಲ್ಲೆ ಪ್ರಕರಣ ಪ್ರತಿಭಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದಾತ್ಮಕ ಸಂದೇಶಗಳನ್ನು ಹಂಚಿದ್ದಕ್ಕೆ ಬಂಧಿತನಾಗಿರುವ ವ್ಯಕ್ತಿಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇದೆ ಎಂಬುದಕ್ಕೆ ಸಾಕ್ಷಿ ಪತ್ತೆಯಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸೋಮವಾರ ಹೇಳಿದ್ದಾರೆ. ಅಲ್ತಾಮಾಶ್ ಖಾನ್ ಎಂದು ಗುರುತಿಸಲಾಗಿರುವ ಬಂಧಿತ ವ್ಯಕ್ತಿಯು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹಾದ್-ಉಲ್-ಮುಸ್ಲಿಮೀನ್ (ಎಐಎಂಐಎಂ) ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದಾತ್ಮಕ ಸಂದೇಶಗಳನ್ನು ಹರಡಿದ ಮತ್ತು ಇಂದೋರ್ ನಗರದಲ್ಲಿ ಗಲಭೆಯನ್ನು ಪ್ರಚೋದಿಸಲು ಸಂಚು ರೂಪಿಸಿದ ಆರೋಪದ ಮೇಲೆ ಅಲ್ತಮಾಶ್ ಖಾನ್ ಎಂಬಾತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

“ಸಾಕ್ಷ್ಯದ ಪ್ರಕಾರ (ತನಿಖೆಯ ಸಮಯದಲ್ಲಿ), ಬಂಧಿತ ವ್ಯಕ್ತಿಗಳಲ್ಲಿ ಒಬ್ಬರಾದ ಅಲ್ತಮಾಶ್ ಖಾನ್, ಬಳೆ ಮಾರಾಟಗಾರ ಮೇಲೆ  ಹಲ್ಲೆ ಪ್ರಕರಣ ನಂತರ ಪೊಲೀಸ್ ಠಾಣೆಯಲ್ಲಿ (ಇಂದೋರ್‌ನಲ್ಲಿ) ಪ್ರತಿಭಟನೆ ನಡೆಸಿದರು. ಆತ ವಾಟ್ಸಾಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.

ವಿಡಿಯೊಗಳು ಮತ್ತು ಆಡಿಯೊಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳನ್ನು ಅಲ್ಟಮಾಶ್ ಖಾನ್‌ನಿಂದ ಪತ್ತೆ ಮಾಡಲಾಗಿದ್ದು, ಅದನ್ನು ನಿಧಾನವಾದಿ ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಅವರು ಹೇಳಿದರು. ಅಲ್ತಮಾಶ್ ಖಾನ್ ಎಐಎಂಐಎಂಗೆ ಸಂಬಂಧ ಹೊಂದಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.

“ಮಧ್ಯಪ್ರದೇಶದಲ್ಲಿ ಶಾಂತಿ ಕದಡಲು (ಅಲ್ತಮಾಶ್) ಖಾನ್ ಜೊತೆ ಕಂಡುಬಂದಿರುವ ಆಕ್ಷೇಪಾರ್ಹ ವಸ್ತುಗಳು ಸಾಕು. ಬಂಧಿತರಾದ ಈ ನಾಲ್ವರ ವಿಚಾರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಬಂಧಿತ ಆರೋಪಿಗಳನ್ನು ಅಲ್ತಮಾಶ್ ಖಾನ್, ಮೊಹಮ್ಮದ್ ಇಮ್ರಾನ್ ಅನ್ಸಾರಿ, ಜಾವೇದ್ ಖಾನ್ ಮತ್ತು ಸೈಯದ್ ಇರ್ಫಾನ್ ಅಲಿ ಎಂದು ಗುರುತಿಸಲಾಗಿದ್ದು, ಎಲ್ಲರೂ 20 ಮತ್ತು 30 ವರ್ಷ ವಯಸ್ಸಿನವರಾಗಿದ್ದು, ಆಮೂಲಾಗ್ರ ಸಿದ್ಧಾಂತದಿಂದ ಪ್ರೇರಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಇಂದೋರ್ ನಗರದಲ್ಲಿ ಇತ್ತೀಚಿನ ಕೆಲವು ಘಟನೆಗಳ ಬಗ್ಗೆ ಜನರಲ್ಲಿ ಅಸಮಾಧಾನದ ಭಾವನೆಯನ್ನು ಸೃಷ್ಟಿಸುವ ಮೂಲಕ ವಿವಿಧ ಸ್ಥಳಗಳಲ್ಲಿ ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಹರಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ವಿರುದ್ಧ ಸೆಕ್ಷನ್ 153-A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಹಾಗೂ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳೆ ಮಾರಾಟಗಾರ ತಸ್ಲೀಂ ಅಲಿ, ಆಗಸ್ಟ್ 22 ರಂದು ಇಂದೋರ್‌ನ ಗೋವಿಂದ್ ನಗರದಲ್ಲಿ ಮಹಿಳೆಯರಿಗೆ ಬಳೆಗಳನ್ನು ಮಾರಾಟ ಮಾಡುವಾಗ “ನಕಲಿ” ಹೆಸರನ್ನು ಬಳಸಿದ್ದಕ್ಕಾಗಿ ಥಳಿಸಲಾಯಿತು. ಹಲ್ಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.ಆರೋಪಿಗಳಿಂದ ಆಕ್ಷೇಪಾರ್ಹ ವಸ್ತುಗಳನ್ನು ಪತ್ತೆ ಮಾಡಲಾಗಿದೆ ಎಂದು ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

ಇದನ್ನೂ ಓದಿ: ಮುಕುಲ್ ರಾಯ್ ನಂತರ ತೃಣಮೂಲ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

(Madhya Pradesh government found Pakistan Links in Man Held For Bangle Seller Protest )

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ