AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಬೆಲ್ಟ್ ಕಟ್ಟಿ, ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪಿ ಸಮೀರ್ ಖಾನ್ ಮನೆ ಕೆಡವಿದ ಸ್ಥಳೀಯ ಆಡಳಿತ

ವರದಿಯ ಪ್ರಕಾರ, ವೈರಲ್ ವುಡಿಯೊವನ್ನು ತಿಲಾ ಜಮಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ ವಿಜಯ್ ರಾಮಚಂದಾನಿ ಎಂಬ ವ್ಯಕ್ತಿಯ ಕುತ್ತಿಗೆಗೆ ಬೆಲ್ಟ್ ಹಾಕಲಾಗಿದ್ದು ಆತ ತನ್ನ ಮುಂದೆ ನಿಂತಿದ್ದ ಆರು ಮಂದಿಗೆ ಕ್ಷಮೆಯಾಚಿಸುತ್ತಿರುವುದು ಕಾಣಿಸುತ್ತದೆ

ಮಧ್ಯಪ್ರದೇಶ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಬೆಲ್ಟ್ ಕಟ್ಟಿ, ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪಿ ಸಮೀರ್ ಖಾನ್ ಮನೆ ಕೆಡವಿದ ಸ್ಥಳೀಯ ಆಡಳಿತ
ಆರೋಪಿಯ ಮನೆ ಧ್ವಂಸ
TV9 Web
| Edited By: |

Updated on: Jun 19, 2023 | 7:14 PM

Share

ಭೋಪಾಲ್‌ನಲ್ಲಿ (Bhopal) ವ್ಯಕ್ತಿಯೊಬ್ಬನನ್ನು ಕತ್ತಿಗೆ ಪಟ್ಟಿ ಕಟ್ಟಿ ನಾಯಿಯಂತೆ ವರ್ತಿಸುವಂತೆ ಮಾಡಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶ (Madhya Pradesh) ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಘಟನೆಯ ಕುರಿತು ಭೋಪಾಲ್ ಪೊಲೀಸರು ಆರು ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದು ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ಮೂವರ ವಿರುದ್ಧ ಮತ್ತೊಮ್ಮೆ ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ 1980 (National Security Act)ಅನ್ನು ಸಹ ಅನ್ವಯಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಎನ್‌ಐಗೆ ತಿಳಿಸಿದರು.

ಯುವಕನಿಗೆ ಕಿರುಕುಳ ನೀಡಿ ಥಳಿಸಿದ ಆರೋಪ ಹೊತ್ತಿರುವ ಸಮೀರ್ ಖಾನ್ ಎಂಬಾತನ ಮನೆಯನ್ನು ಪೊಲೀಸರ ಸಮ್ಮುಖದಲ್ಲಿ ಸ್ಥಳೀಯ ಆಡಳಿತ ಧ್ವಂಸಗೊಳಿಸಿದೆ. ಸಮೀರ್, ಫೈಜಾನ್ ಮತ್ತು ಸಾಜಿದ್ ಎಂಬ ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭೋಪಾಲ್ ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಲೈವ್ ಹಿಂದೂಸ್ತಾನ್ ವರದಿ ಮಾಡಿದೆ.

ವರದಿಯ ಪ್ರಕಾರ, ವೈರಲ್ ವುಡಿಯೊವನ್ನು ತಿಲಾ ಜಮಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ ವಿಜಯ್ ರಾಮಚಂದಾನಿ ಎಂಬ ವ್ಯಕ್ತಿಯ ಕುತ್ತಿಗೆಗೆ ಬೆಲ್ಟ್ ಹಾಕಲಾಗಿದ್ದು ಆತ ತನ್ನ ಮುಂದೆ ನಿಂತಿದ್ದ ಆರು ಮಂದಿಗೆ ಕ್ಷಮೆಯಾಚಿಸುತ್ತಿರುವುದು ಕಾಣಿಸುತ್ತದೆ. ಈ ಆರು ಮಂದಿ ತನ್ನನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಜೂನ್ 23 ರಂದು ಪಾಟ್ನಾದಲ್ಲಿ ವಿಪಕ್ಷ ಸಭೆ; ಬಿಹಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ನಿತೀಶ್‌ರನ್ನು ಕೇಳಿ: ಅನುರಾಗ್ ಠಾಕೂರ್

ಆರೋಪಿಗಳನ್ನು 4-5 ಗಂಟೆಗಳಲ್ಲಿ ಬಂಧಿಸಲಾಗಿದೆ. ಅವರ ವಿರುದ್ಧ ಬುಲ್ಡೋಜರ್ ಕ್ರಮ ಕೈಗೊಳ್ಳಲಾಗುವುದು. ನಾವು ಭೋಪಾಲ್‌ನಲ್ಲಿ ಇಂತಹ ಕ್ರಮವನ್ನು ಕೈಗೊಳ್ಳುತ್ತೇವೆ ಅದು ರಾಜ್ಯಾದ್ಯಂತ ಸಂದೇಶವನ್ನು ಕಳುಹಿಸುತ್ತದೆ ಎಂದು ಮಧ್ಯಪ್ರದೇಶದ ಗೃಹ ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್