ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ

Pathaan ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಉಡುಗೆಯನ್ನು"ಅತ್ಯಂತ ಆಕ್ಷೇಪಾರ್ಹ" ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು "ಕೊಳಕು ಮನಸ್ಥಿತಿ" ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ
ನರೋತ್ತಮ್ ಮಿಶ್ರಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 14, 2022 | 8:11 PM

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿರುವ ಬಾಲಿವುಡ್ ಚಿತ್ರ ‘ಪಠಾಣ್’ ಚಿತ್ರದಲ್ಲಿನ (Pathaan) ಕೆಲವು ದೃಶ್ಯಗಳನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ತಡೆಯುವುದಾಗಿ ಬುಧವಾರ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಅವರ ಉಡುಗೆಯನ್ನು”ಅತ್ಯಂತ ಆಕ್ಷೇಪಾರ್ಹ” ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು “ಕೊಳಕು ಮನಸ್ಥಿತಿ” ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.ಮಧ್ಯಪ್ರದೇಶ ರಾಜ್ಯ ಸರ್ಕಾರದ ವಕ್ತಾರರಾಗಿರುವ ಮಿಶ್ರಾ, ದೀಪಿಕಾ ಜೆಎನ್‌ಯು ಪ್ರಕರಣದಲ್ಲಿ ಟುಕ್ಡೆ ಟುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 2016ರ ಪ್ರತಿಭಟನೆಯ ನಂತರ ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದನ್ನು ಉಲ್ಲೇಖಿಸಿ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ. ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದು ಆ ಹೊತ್ತಲ್ಲಿ ವಿವಾದವಾಗಿತ್ತು. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಧರಿಸಿದ್ದ ‘ಕೇಸರಿ’ ಬಣ್ಣದ ಉಡುಗೆಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಪಠಾಣ್ ಜನವರಿ 25, 2023 ರಂದು ತೆರೆಗೆ ಬರಲಿದೆ.

ಬಾಲಿವುಡ್‌ನ ನಟ, ನಟಿಯರನ್ನು ಮಿಶ್ರಾ ಟೀಕೆ ಮಾಡಿರುವುದು ಇದು ಮೊದಲೇನೂ ಅಲ್ಲ. ಅಕ್ಟೋಬರ್‌ನಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ’ ನಿರ್ಮಾಪಕರಿಗೆ ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು “ತಪ್ಪು” ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಿಶ್ರಾ ಎಚ್ಚರಿಸಿದ್ದರು.

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಇದಲ್ಲದೆ, ಈ ವರ್ಷದ ಜುಲೈನಲ್ಲಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ ಚಿತ್ರದ ವಿವಾದಾತ್ಮಕ ಪೋಸ್ಟರ್‌ನಲ್ಲಿ ದೇವಿ ಸಿಗರೇಟ್ ಸೇದುತ್ತಿರುವಂತೆ ತೋರಿಸಿದ್ದಕ್ಕೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು