ಮಧ್ಯಪ್ರದೇಶದ ಮೈಹಾರ್ನಲ್ಲಿ ಕಲ್ಲು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ; ಸ್ಥಳದಲ್ಲೇ 6 ಸಾವು, 20 ಜನರಿಗೆ ಗಾಯ
Maihar Road Accident: ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ನಾದನ್ ದೇಹತ್ ಬಳಿ ಕಲ್ಲು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಸ್ನಲ್ಲಿದ್ದ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಮೈಹಾರ್ ಮತ್ತು ಅಮರಪತನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಹಾರ್, ಸೆ.29: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ನಾದನ್ ದೇಹತ್ ಬಳಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು ದುರ್ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ಕಲ್ಲು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಸ್ನಲ್ಲಿದ್ದ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು (Death), 20 ಜನರಿಗೆ ಗಾಯಗಳಾಗಿವೆ (Injury). ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪೊಲೀಸರ ಪ್ರಕಾರ, ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪ್ರಯಾಗ್‌ರಾಜ್‌ನಿಂದ ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ರಸ್ತೆಬದಿಯಲ್ಲಿ ನಿಂತಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ದುರ್ಘಟನೆ ಸಂಭವಿಸಿದೆ.
#WATCH | Madhya Pradesh: On collision of a bus and dumper in the Maihar District, Maihar SP Sudhir Agarwal says, “In this accident, 17-20 injured have been admitted to different hospitals… 6 people have lost their lives. The bus was going from Prayagraj to Nagpur… The… pic.twitter.com/XhzyH4w17L
— ANI (@ANI) September 29, 2024
ಇದನ್ನೂ ಓದಿ: ಭೀಕರ ಕಾರು ಅಪಘಾತಕ್ಕೀಡಾಗಿ ಕೂದಲೆಳೆ ಅಂತರದಲ್ಲಿ ಬದುಕುಳಿದ ಭಾರತದ ಕ್ರಿಕೆಟಿಗರಿವರು
ಇನ್ನು ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸತ್ನಾಗೆ ಕಳುಹಿಸಲಾಗಿದೆ ಎಂದು ಮೈಹರ್‌ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರವಾಲ್ ಅವರು ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಮೈಹಾರ್ ಮತ್ತು ಅಮರಪತನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಅಪಘಾತದಲ್ಲಿ 17-20 ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಸ್ ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ಹೋಗುತ್ತಿತ್ತು. ಬಸ್ ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.
ದೇಶಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ