Madhya Pradesh: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ

|

Updated on: Jul 05, 2023 | 8:01 AM

ಆದಿವಾಸಿ ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

Madhya Pradesh: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ
ಆದಿವಾದಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿ
Follow us on

ಆದಿವಾಸಿ ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶ(Madhya Pradesh) ದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಆರೋಪಿಗಳ ಮೇಲೆ ಎನ್ಎಸ್ಎ ವಿಧಿಸಲು ಆದೇಶಿಸಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಟ್ವೀಟ್ ಮಾಡುವ ಮೂಲಕ ಶಿವರಾಜ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆದಿವಾಸಿಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಧ್ಯಪ್ರದೇಶ ನಂಬರ್ ಒನ್ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ಸಿಧಿ ಜಿಲ್ಲೆಯ ಬುಡಕಟ್ಟು ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಕೃತ್ಯದ ವಿಡಿಯೋ ಕಣ್ಣಮುಂದಿದೆ. ಬುಡಕಟ್ಟು ಸಮಾಜದ ಯುವಕರೊಂದಿಗೆ ಇಂತಹ ಹೀನ ಕೃತ್ಯಕ್ಕೆ ನಾಗರಿಕ ಸಮಾಜದಲ್ಲಿ ಜಾಗವಿಲ್ಲ ಎಂದಿದ್ದಾರೆ.

ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿ ಹಾಗೂ ಬಿಜೆಪಿ ಸಂಬಂಧವಿದೆ ಎಂದು ಆರೋಪಿಸಿದ್ದಾರೆ, ಈ ಘಟನೆ ಇಡೀ ಮಧ್ಯಪ್ರದೇಶವನ್ನೇ ತಲೆತಗ್ಗಿಸುವಂತೆ ಮಾಡಿದೆ.  ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಮಧ್ಯಪ್ರದೇಶದಲ್ಲಿ ಆದಿವಾಸಿಗಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಬೇಕು ಎಂದು ನಾನು ಮುಖ್ಯಮಂತ್ರಿಯಲ್ಲಿ ಒತ್ತಾಯಿಸುತ್ತೇನೆ ಎಂದು ಕಮಲ್​ನಾಥ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮಂಗಳೂರಿನಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ! ಬಿಜೆಪಿ ನಾಯಕ ಸೇರಿ 9 ಜನರ ವಿರುದ್ಧ ಕೇಸ್ ದಾಖಲು

ಆರೋಪಿ ಪ್ರವೇಶ್ ಶುಕ್ಲಾನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಿಧಿ ಜಿಲ್ಲಾ ಎಎಸ್ಪಿ ಅಂಜು ಲತಾ ಪಟೇಲ್ ತಿಳಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಮುಂದಿನ ಕಾನೂನು ಕ್ರಮವನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು. ಈ ಹಿಂದೆ, ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294, 504 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಶುಕ್ಲ ತಪ್ಪಿಸಿಕೊಳ್ಳುವ ಸಲುವಾಗಿ ಒಂದು ಊರಿಂದ ಮತ್ತೊಂದು ಊರಿಗೆ ಓಡಾಡುತ್ತಲೇ ಇದ್ದ, ಮಧ್ಯರಾತ್ರಿ 2 ಗಂಟೆಗೆ ಆತನನ್ನು ಬಂಧಿಸಲಾಗಿದೆ. ಶುಕ್ಲಾ ಅವರ ಪತ್ನಿ ಮತ್ತು ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಯಿತು.
ಆರೋಪಿಯು ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ, ಆದಾಗ್ಯೂ, ಪಕ್ಷವು ಅವರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ