ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ

ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ದೇಹವನ್ನು ಕತ್ತರಿಸಿ ಎರಡು ರೈಲುಗಳಲ್ಲಿ ಇರಿಸಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಗಳವಾಡಿ ಮನೆಬಿಟ್ಟು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಲ್ಲದೆ ಅತ್ಯಾಚಾರಕ್ಕೂ ಯತ್ನಿಸಿದ್ದ ಎನ್ನಲಾಗಿದೆ.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ
ರೈಲು
Follow us
|

Updated on: Jun 24, 2024 | 12:23 PM

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಎರಡು ರೈಲುಗಳಲ್ಲಿ ಭಾಗಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 60 ವರ್ಷದ ವ್ಯಕ್ತಿಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ.

ಜೂನ್​ 6 ರಂದು ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದಾಗ ಆರೋಪಿ ಕಮಲೇಶ್​ ಪಟೇಲ್ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಜೂನ್ 6ರಂದು ಪತಿಯೊಂದಿಗೆ ಜಗಳವಾಡಿದ ಬಳಿಕ ಮನೆ ಬಿಟ್ಟು ಬಂದಿದ್ದಳು, ಮಹಿಳೆ ಮಥುರಾಗೆ ಹೋಗಲು ಉಜ್ಜಯಿನಿ ನಿಲ್ದಾಣದಲ್ಲಿ ಕುಳಿತಿದ್ದಾಗ ಪಟೇಲ್ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದ ಬಳಿಕ ನಿದ್ರೆ ಮಾತ್ರೆ ಬೆರೆಸಿ ಆಹಾರವನ್ನು ಕೊಟ್ಟಿದ್ದ.

ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದ, ಆಕೆ ಕೂಡಲೇ ಎಚ್ಚರಗೊಂಡುಯ ಕಿರುಚಾಡಲು ಶುರು ಮಾಡಿದ್ದಳು. ಪಟೇಲ್ ಮೊದಲು ಕತ್ತು ಹಿಸುಕಿ ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಇಂದೋರ್​-ನಾಗ್ಡಾ ಮತ್ತು ಇಂದೋರ್ ಡೆಹ್ರಾಡೂನ್ ಪ್ಯಾಸೆಂಜರ್ ರೈಲುಗಳಲ್ಲಿ ಇರಿಸಿದ್ದ.

ಮತ್ತಷ್ಟು ಓದಿ: ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ

37 ವರ್ಷದ ಮಹಿಳೆಯ ಕೈಗಳು ಹಾಗೂ ಕಾಲುಗಳು ಜೂನ್ 10ರಂದು ಉತ್ತರಾಖಂಡದ ಋಷಿಕೇಶದ ರೈಲಿನಲ್ಲಿ ಪತ್ತೆಯಾಗಿದ್ದರೆ, ಉಳಿದ ದೇಹದ ಭಾಗಗಳು ಜೂನ್ 9ರಂದು ಇಂದೋರ್​ ರೈಲಿನಿಂದ ಹೊರತೆಗೆಯಲಾಯಿತು.

ಜೂನ್ 12ರಂದು ರತ್ಲಾಮ್ ಜಿಲ್ಲೆಯ ಬಿಲ್ಪಾಂಕ್ ಪೊಲೀಸ್ ಠಾಣೆಯಲ್ಲಿ ಆಕೆಯ ಸಂಬಂಧಿಕರು ಕಾಣೆಯಾದ ದೂರನ್ನು ದಾಖಲಿಸಿದ್ದರು. ಪಟೇಲ್​ನನ್ನು ಉಜ್ಜಿಯಿನಿಯಲ್ಲಿ ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ ಚಾಕುವನ್ನು ಇತರೆ ಸಾಕ್ಷ್ಯಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ