AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ವ್ಯಕ್ತಿಯನ್ನು ಅರೆಬೆತ್ತಲೆ ಮಾಡಿ ಬಾಯಿಯಿಂದ ಶೂ ಎತ್ತಲು ಒತ್ತಾಯಿಸಿದ ವಿಡಿಯೊ ವೈರಲ್; ಮೂವರ ಬಂಧನ

ವಿಡಿಯೊ ನೋಡಿದ ಮೇಲೆ ನಾವು ಪ್ರಮುಖ ಆರೋಪಿ ಜವಾಹರ್ ಸಿಂಗ್ (55), ಗೊಂಡ್ ಬುಡಕಟ್ಟಿನ ಸದಸ್ಯ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದೇವೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಮಧ್ಯಪ್ರದೇಶ: ವ್ಯಕ್ತಿಯನ್ನು ಅರೆಬೆತ್ತಲೆ ಮಾಡಿ ಬಾಯಿಯಿಂದ ಶೂ ಎತ್ತಲು ಒತ್ತಾಯಿಸಿದ ವಿಡಿಯೊ ವೈರಲ್; ಮೂವರ ಬಂಧನ
ಮಧ್ಯಪ್ರದೇಶ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Jul 24, 2023 | 4:43 PM

Share

ರೇವಾ ಜುಲೈ 24: ಮಧ್ಯಪ್ರದೇಶದ (Madhya Pradesh) ರೇವಾ (Rewa)ಜಿಲ್ಲೆಯಲ್ಲಿ 34 ವರ್ಷದ ವ್ಯಕ್ತಿಯೊಬ್ಬನನ್ನು ಅರೆಬೆತ್ತಲೆ ಮಾಡಿ, ಆತನ ಮೇಲೆ ಹಲ್ಲೆ ನಡೆಸಿ ಬಾಯಿಯಿಂದ ಶೂ ಎತ್ತಿಕೊಳ್ಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ವೈರಲ್ (Viral Video) ಆದ ಬಳಿಕ ಪ್ರಮುಖ ಆರೋಪಿ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವ್ಯಕ್ತಿಯೊಬ್ಬನ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿ ಆತನಿಗೆ ಹಿಂಸೆ ನೀಡುತ್ತಿರುವ ಈ ವಿಡಿಯೊ ಎರಡು ವರ್ಷಗಳಿಗಿಂತಲೂ ಹಳೆಯದು. ಆ ವ್ಯಕ್ತಿ ಬಿಟ್ಟು ಬಿಡುವಂತೆ ಅಂಗಾಲಾಚುತ್ತಿರುವುದು ಇದರಲ್ಲಿ ಕಾಣಿಸುತ್ತದೆ. ಆಸ್ತಿ ವಿವಾದವೇ ಇದಕ್ಕೆ ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿದ ಮೇಲೆ ನಾವು ಪ್ರಮುಖ ಆರೋಪಿ ಜವಾಹರ್ ಸಿಂಗ್ (55), ಗೊಂಡ್ ಬುಡಕಟ್ಟಿನ ಸದಸ್ಯ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದೇವೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಈ ವಿಡಿಯೊ ಮೇ 2021 ರಲ್ಲಿ ರೇವಾದಲ್ಲಿನ ಹನುಮ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾಹಿ ಗ್ರಾಮದಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಅವರು ಹೇಳಿದರು .ಪ್ರಮುಖ ಆರೋಪಿ ಬುಡಕಟ್ಟು ಜನಾಂಗದವರಾಗಿದ್ದರೆ, ಸಂತ್ರಸ್ತ ಇನ್ನೊಂದು ಜಾತಿಯವರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿಯು ಸರ್ಕಾರಿ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದು, ಗ್ರಾಮದ ಸರಪಂಚ್‌ನ ಪತಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈತ ಇನ್ನೊಬ್ಬ ವ್ಯಕ್ತಿಯನ್ನು ಅಪಹರಿಸಿ, ಅವನನ್ನು ಅರೆಬೆತ್ತಲೆ ಮಾಡಿ, ಅವನ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿ, ಗುದ್ದಿದ್ದಾನೆ. ಆತನ ಬಾಯಿಯಿಂದ ಶೂ ಎತ್ತುವಂತೆ ಮಾಡಿದ್ದಾನೆ ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ

ಜವಾಹರ್ ಸಿಂಗ್ ಮತ್ತು ಇತರ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇತ್ತೀಚೆಗಷ್ಟೇ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಯೊಂದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.ರೇವಾ ಮತ್ತು ಸಿಧಿ ಜಿಲ್ಲೆಗಳು ಮಧ್ಯಪ್ರದೇಶದ ವಿಂಧ್ಯಾ ಪ್ರದೇಶದ ಅಡಿಯಲ್ಲಿ ಬರುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್