
ಗ್ವಾಲಿಯರ್, ನವೆಂಬರ್ 8: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಯುವತಿಯೊಬ್ಬರು ತನ್ನ ಮಾವನನ್ನು ಮದುವೆಯಾಗಲು ನಿರಾಕರಿಸಿದ್ದರು. ಇದರಿಂದಾಗಿ ಆಕೆಯ ಸೋದರ ಮಾವ ಆಕೆಯ ಮೇಲೆ ಆ್ಯಸಿಡ್ (Acid Attack) ಎರಚಿದ್ದಾರೆ. ಇದರಿಂದ ಆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯರು ಆಕೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆತ ಆ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
9 ತಿಂಗಳ ಹಿಂದೆ ಪತಿಯ ಮರಣದ ನಂತರ ಆ ಯುವತಿ ಅವದ್‌ಪುರಕ್ಕೆ ತೆರಳಿ ತನ್ನ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದಳು. ಪತ್ನಿಯನ್ನು ಕಳೆದುಕೊಂಡಿದ್ದ ಮುಶೀರ್ ಖಾನ್, ಆಕೆಯ ಮನೆಗೆ ಆ್ಯಸಿಡ್ ಬಾಟಲಿಯನ್ನು ತೆಗೆದುಕೊಂಡು ಹೋಗಿ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದಾನೆ. ಆಕೆ ಅದಕ್ಕೆ ನಿರಾಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಇದರಿಂದ ತೀವ್ರ ಸುಟ್ಟಗಾಯಗಳಾಗಿವೆ. ಅದೃಷ್ಟವಶಾತ್ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಪತಿಯ ಮೇಲೆ ಅನುಮಾನ, ದೀಪಾವಳಿಯಂದು ಕುದಿಯುವ ನೀರು ಸುರಿದು, ಆ್ಯಸಿಡ್ ಎರಚಿದ ಪತ್ನಿ
ಆ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಸುಟ್ಟ ಗಾಯಗಳ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಅವರು “ನನ್ನ ಮಾವ ನನ್ನನ್ನು ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ. ಅದಕ್ಕೆ ನಾನು ಒಪ್ಪದಿದ್ದಾಗ ನನ್ನ ಮೇಲೆ ಆ್ಯಸಿಡ್ ಎರಚಿಸಿದ್ದಾನೆ” ಎಂದು ಆಕೆ ಹೇಳಿದ್ದಾಳೆ. ಆತ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:50 pm, Sat, 8 November 25