ಮಧ್ಯಪ್ರದೇಶದಲ್ಲಿ ಮತ್ತೊಂದು ಹೀನ ಕೃತ್ಯ; ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ, 7 ಮಂದಿ ಅರೆಸ್ಟ್
ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮುಖಕ್ಕೆ ಮಸಿ ಬಳಿದು, ಮಲ ತಿನಿಸಿ, ಚಪ್ಪಲಿ ಹಾರ ಹಾಕಿ ಊರೆಲ್ಲಾ ಮೆರವಣಿಗೆ ಮಾಡಲಾಗಿದೆ.
ಮಧ್ಯಪ್ರದೇಶ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ, ಹೇಯ ಕೃತ್ಯ ಬಹಿರಂಗವಾಗಿದೆ. ಇಬ್ಬರು ದಲಿತ ಯುವಕರಿಗೆ(Dalits) ಮಲ ತಿನಿಸಿ(Human Excreta) ಮೆರವಣಿಗೆ ಮಾಡಲಾಗಿದೆ. ಮಧ್ಯಪ್ರದೇಶದ ಶಿವಗಿರಿ ಎಂಬಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ(Sexual Harassment) ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮುಖಕ್ಕೆ ಮಸಿ ಬಳಿದು, ಮಲ ತಿನಿಸಿ, ಚಪ್ಪಲಿ ಹಾರ ಹಾಕಿ ಊರೆಲ್ಲಾ ಮೆರವಣಿಗೆ ಮಾಡಲಾಗಿದೆ. ಅಲ್ಲದೆ ಅವರ ಮನೆಯನ್ನೂ ದ್ವಂಸ ಮಾಡಲಾಗಿದೆ. ಜೂನ್ 30ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 7 ಜನರನ್ನು ಬಂಧಿಸಲಾಗಿದೆ.
ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ಯುವಕರ ಮೇಲೆ ದೌರ್ಜನ್ಯ ನಡೆದಿತ್ತು, ಆದರೆ ಬುಧವಾರ ಯುವಕರ ವಿಡಿಯೋ ವೈರಲ್ ಆದ ನಂತರ ಕೃತ್ಯ ಬೆಳಕಿಗೆ ಬಂದಿದೆ. ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಯುವಕರನ್ನು ಹಿಂಸಿಸಿದ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಈ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಕೇಸ್ ಹಾಕಲಾಗಿದೆ ಎಂದು ಶಿವಪುರಿ ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ ತಿಳಿಸಿದರು.
ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
23 ಮತ್ತು 24 ವರ್ಷ ವಯಸ್ಸಿನ ಇಬ್ಬರು ದಲಿತ ಯುವಕರು ಆರೋಪಿ ಕುಟುಂಬದ ಯುವತಿ(26) ಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ವಿಷಯ ತಿಳಿದ ಮನೆಯವರು ಆ ಇಬ್ಬರು ಯುವಕರನ್ನು ಮನೆಗೆ ಕರೆಸುವಂತೆ ಯುವತಿಗೆ ಒತ್ತಾಯಿಸಿದ್ದಾರೆ. ಅದರಂತೆ ಯುವಕರ ಜೂನ್ 30 ರಂದು ಯುವತಿಯ ಮನೆಗೆ ಬಂದಾಗ ಕುಟುಂಬಸ್ಥರೆಲ್ಲ ಸೇರಿಕೊಂಡು ಯುವಕರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎಂದು ಎಸ್‌ಪಿ ಭಡೋರಿಯಾ ಹೇಳಿದರು.
ಆದರೆ ತಮ್ಮ ಮನೆಯ ಯುವತಿಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿದ್ದು ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ದಲಿತ ಯುವಕರು ಕಣ್ಣೀರಿಟ್ಟಿದ್ದಾರೆ. ನಮ್ಮನ್ನು ಭೇಟಿಯಾಗಲು ಕರೆದ ನಂತರ ನಾವು ಅವರ ಮನೆಗೆ ಹೋದೆವು. ನಾವು ಯಾವುದೇ ಅಪರಾಧ ಮಾಡಿಲ್ಲ ಎಂದಿದ್ದಾರೆ.
ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ