AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಂಥಾ ಹುಚ್ಚು ಪ್ರೀತಿ, ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಶಿಕ್ಷಕಿ ಪ್ರೀತಿ(Love)ಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತಲುಪಿದ್ದ

ಇದೆಂಥಾ ಹುಚ್ಚು ಪ್ರೀತಿ, ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ
ವಿದ್ಯಾರ್ಥಿ
ನಯನಾ ರಾಜೀವ್
|

Updated on: Aug 20, 2025 | 2:07 PM

Share

ಭೋಪಾಲ್, ಆಗಸ್ಟ್ 20: ಶಿಕ್ಷಕಿ ಪ್ರೀತಿ(Love)ಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತಲುಪಿದ್ದ. 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದ.

ಪ್ರಾಥಮಿಕ ತನಿಖೆಯಲ್ಲಿ ಸೂರ್ಯಾಂಶ್ ಶಿಕ್ಷಕಿಯನ್ನು ಪ್ರೀತಿಸುತ್ತಿದ್ದ ಆದರೆ ಅದು ಒನ್​ ಸೈಡೆಡ್ ಪ್ರೀತಿಯಾಗಿತ್ತು. ಆಗಸ್ಟ್ 15 ರ ಕಾರ್ಯಕ್ರಮಕ್ಕೆ ಶಿಕ್ಷಕಿ ಸೀರೆ ಧರಿಸಿ ಬಂದಾಗ, ಆರೋಪಿ ವಿದ್ಯಾರ್ಥಿನ ಏನೇನೋ ಮನಬಂದಂತೆ ಕಮೆಂಟ್ ಮಾಡಿದ್ದ, ಇದರಿಂದ ಕೋಪಗೊಂಡ ಶಿಕ್ಷಕಿ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು.

ಮತ್ತಷ್ಟು ಓದಿ: ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಬಳಿಕ ಸೂರ್ಯಾಂಶ್​ಗೆ ಮುಖ್ಯೋಪಾಧ್ಯಾಯರು ಕರೆ ಮಾಡಿ ಬೈದಿದ್ದರು, ಇದರಿಂದ ಆತ ಕೋಪಗೊಂಡಿದ್ದ. ಶಿಕ್ಷಕಿಗೆ ತೊಂದರೆ ಕೊಡಬೇಕೆಂದೇ ಆತ ಅಲ್ಲಿಗೆ ತೆರಳಿದ್ದ. ಶಿಕ್ಷಕಿಯನ್ನು ಮೂರು ತಿಂಗಳ ಹಿಂದಷ್ಟೇ ಅತಿಥಿ ಶಿಕ್ಷಕಿಯನ್ನಾಗಿ ನೇಮಿಸಲಾಗಿತ್ತು. ಕೊತ್ವಾಲಿ ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಡೊಂಗರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣಪುರ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದರು. ಪ್ರಸ್ತುತ ಆತ ಬಂಧನದಲ್ಲಿದ್ದು, ವಿವರವಾದ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?