ಸಿಎಂ ಶಿವರಾಜ್ ಸಿಂಗ್ ಚೌಹಾಣ್​ಗೆ ತಣ್ಣನೆ ಚಹಾ ನೀಡಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ; ಆಮೇಲೇನಾಯ್ತು?

ಸೋಮವಾರ ಬೆಳಗ್ಗೆ 11.30ಕ್ಕೆ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಸಾರಿಗೆ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ರಾಕೇಶ್ ಕನ್ಹುವಾ ವಹಿಸಿಕೊಂಡಿದ್ದರು.

ಸಿಎಂ ಶಿವರಾಜ್ ಸಿಂಗ್ ಚೌಹಾಣ್​ಗೆ ತಣ್ಣನೆ ಚಹಾ ನೀಡಿದ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ; ಆಮೇಲೇನಾಯ್ತು?
ಸಿಎಂ ಶಿವರಾಜ್ ಸಿಂಗ್ ಚೌಹಾಣ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 13, 2022 | 1:20 PM

ಭೋಪಾಲ್: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರಿಗೆ ತಣ್ಣನೆಯ ಮತ್ತು ಕಳಪೆ ಗುಣಮಟ್ಟದ ಚಹಾದ ವ್ಯವಸ್ಥೆ ಮಾಡಿದ್ದಕ್ಕಾಗಿ ಮಧ್ಯಪ್ರದೇಶದ ಸರ್ಕಾರಿ ಅಧಿಕಾರಿಯೊಬ್ಬರಿಗೆ ನೋಟಿಸ್ ನೀಡಲಾಗಿದೆ. ಆದರೆ, ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಗಲಾಟೆಯೆದ್ದ ಹಿನ್ನೆಲೆಯಲ್ಲಿ ಆ ನೋಟಿಸ್ ಅನ್ನು ಹಿಂಪಡೆಯಲಾಗಿದೆ. ಸೋಮವಾರ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡಿದ ಕಿರಿಯ ಸರಬರಾಜು ಅಧಿಕಾರಿ ರಾಕೇಶ್ ಕನ್ಹುವಾ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ರಾಜನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಡಿಪಿ ದ್ವಿವೇದಿ ತಿಳಿಸಿದ್ದಾರೆ.

ಶೋಕಾಸ್ ನೋಟಿಸ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಛತ್ತರ್‌ಪುರ ಜಿಲ್ಲಾಧಿಕಾರಿ ಸಂದೀಪ್ ಜಿ.ಆರ್ ದ್ವಿವೇದಿ ನೀಡಿದ್ದ ನೋಟಿಸ್ ರದ್ದುಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 11.30ಕ್ಕೆ ಖಜುರಾಹೊ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಸಾರಿಗೆ ಭೇಟಿಯ ಸಂದರ್ಭದಲ್ಲಿ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ರಾಕೇಶ್ ಕನ್ಹುವಾ ವಹಿಸಿಕೊಂಡಿದ್ದರು ಎಂದು ದ್ವಿವೇದಿ ಹೇಳಿದ್ದಾರೆ.

ಇದನ್ನೂ ಓದಿ: Akshata Murthy: ಬಂಗಲೆ ಹೊರಗೆ ಕಾದಿದ್ದ ಪತ್ರಕರ್ತರಿಗೆ ಚಹಾ ನೀಡಿದ ಅಕ್ಷತಾ ಮೂರ್ತಿ; ಮತ್ತೆ ಟೀಕೆಗೀಡಾದ ರಿಷಿ ಸುನಕ್

ರಾಕೇಶ್ ಕನ್ಹುವಾ ವ್ಯವಸ್ಥೆ ಮಾಡಿದ್ದ ಚಹಾ ತಣ್ಣಗಿದ್ದು, ಕಳಪೆ ಗುಣಮಟ್ಟದ್ದಾಗಿತ್ತು ಎಂದು ಅವರು ಹೇಳಿದ್ದಾರೆ. ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ನಿಮಗೆ ವಹಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳಿಗೆ ನೀಡಿದ ಚಹಾದ ಗುಣಮಟ್ಟವು ಕೆಳಮಟ್ಟದ್ದಾಗಿದೆ ಮತ್ತು ಅದು ತಣ್ಣಗಾಗಿತ್ತು ಎಂದು ಎಸ್‌ಡಿಎಂ ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಇದು ಜಿಲ್ಲಾಡಳಿತಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಅಲ್ಲದೆ, ವಿವಿಐಪಿಗಳಿಗೆ ಮೀಸಲಾದ ಪ್ರೋಟೋಕಾಲ್ ಬಗ್ಗೆ ಪ್ರಶ್ನೆಯನ್ನು ಎತ್ತುತ್ತದೆ. ಹೀಗಾಗಿ, ಮೂರು ದಿನಗಳಲ್ಲಿ ಕಿರಿಯ ಸರಬರಾಜು ಅಧಿಕಾರಿಯಿಂದ ಎಸ್‌ಡಿಎಂ ವಿವರಣೆ ಕೇಳಿದೆ.

ಈ ನೋಟಿಸ್‌ನ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಟೀಕೆಗೆ ಒಳಗಾಗಿದ್ದರಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕಿರಿಯ ಅಧಿಕಾರಿಗೆ ನೀಡಿದ್ದ ಶೋಕಾಸ್ ನೋಟಿಸ್ ಅನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್