Madhya Pradesh Rain: ಭಾರೀ ಮಳೆಯಿಂದ ಮಧ್ಯಪ್ರದೇಶದ 39 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಪ್ರವಾಹದಿಂದ 400 ಜನರ ರಕ್ಷಣೆ

| Updated By: ಸುಷ್ಮಾ ಚಕ್ರೆ

Updated on: Aug 23, 2022 | 8:34 AM

ಭೂಪಾಲ್, ಉಜ್ಜಯಿನಿ, ಜಬಲ್‌ಪುರ್, ರತ್ಲಾಮ್, ನೀಮುಚ್ ಮತ್ತು ಮಂದಸೌರ್ ಸೇರಿದಂತೆ 39 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

Madhya Pradesh Rain: ಭಾರೀ ಮಳೆಯಿಂದ ಮಧ್ಯಪ್ರದೇಶದ 39 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಪ್ರವಾಹದಿಂದ 400 ಜನರ ರಕ್ಷಣೆ
ಮಳೆ
Follow us on

ಭೂಪಾಲ್: ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಪಾಲ್, ಉಜ್ಜಯಿನಿ, ಜಬಲ್‌ಪುರ್, ರತ್ಲಾಮ್, ನೀಮುಚ್ ಮತ್ತು ಮಂದಸೌರ್ ಸೇರಿದಂತೆ 39 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ (Red Alert) ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಎಸ್​ಡಿಆರ್​ಎಫ್ ಮತ್ತು ಎನ್​ಡಿಆರ್​ಎಫ್ (NDRF) ಸಿಬ್ಬಂದಿ ಸೇರಿ 400 ಜನರನ್ನು ಪ್ರವಾಹದಿಂದ ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬಲವಾದ ಗಾಳಿ ಬೀಸಿದ್ದು, 1,500 ಮಿ.ಮೀ ಮಳೆ ದಾಖಲಾಗಿದೆ. ಭೂಪಾಲ್‌ನಲ್ಲಿ ನಿನ್ನೆ ಬೀಸಿದ ಬಿರುಗಾಳಿಯಿಂದಾಗಿ ಸಮುದ್ರದ ಅಲೆಗಳು 20 ಅಡಿ ಎತ್ತರಕ್ಕೆ ಏರುತ್ತಿರುವುದು ಕಂಡು ಬಂದಿತು. ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜನರಿಗೆ ಮನವಿ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಕಳೆದ 2 ದಿನಗಳಿಂದ ನಿರಂತರ ಭಾರೀ ಮಳೆ ಮುಂದುವರಿದಿದೆ. ಭೂಪಾಲ್, ಗುನಾ, ರೈಸನ್, ಸಾಗರ್ ಮತ್ತು ಜಬಲ್‌ಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡು, ಕೊಡಗು, ಮೈಸೂರು, ಕೋಲಾರ, ಹಾಸನದಲ್ಲಿ ಇನ್ನು 3 ದಿನ ಮಳೆ; ಹಳದಿ ಅಲರ್ಟ್ ಘೋಷಣೆ

ಮಧ್ಯಪ್ರದೇಶದ ಇಂದೋರ್, ಗ್ವಾಲಿಯರ್, ಧಾರ್ ಮತ್ತು ಖಾರ್ಗೋನ್ ಸೇರಿದಂತೆ 12 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿದಿಶಾ ಜಿಲ್ಲೆಯಲ್ಲಿ 190, ರಾಜಗಢದಲ್ಲಿ 103, ಅಶೋಕನಗರದಲ್ಲಿ 94, ರೈಸನ್​ನಲ್ಲಿ 7, ಜಬ್ಲಾಪುರದಲ್ಲಿ 5, ಮಾಂಡ್ಲಾದಲ್ಲಿ 3, ಸಿಧಿಯಲ್ಲಿ 2, ಗುನಾದಲ್ಲಿ 3 ಜನರನ್ನು ಪ್ರವಾಹ ಸ್ಥಳದಿಂದ ರಕ್ಷಿಸಲಾಗಿದೆ.

ಇಂದು ಪಶ್ಚಿಮ ರಾಜಸ್ಥಾನ ಮತ್ತು ಗುಜರಾತ್ ಪ್ರದೇಶದ ಉತ್ತರ ಭಾಗಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಮತ್ತು ಆಗಸ್ಟ್ 25 ರಂದು ಛತ್ತೀಸ್‌ಗಢದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಗಸ್ಟ್ 24ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್​ 25ರವರೆಗೆ ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ