ಮಧ್ಯಪ್ರದೇಶ ಬಾಲಕಿಯ ಅತ್ಯಾಚಾರ ಪ್ರಕರಣ, ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ: ಕಮಲ್ ನಾಥ್

ಮಧ್ಯಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣವು ಈಗ ರಾಜಕೀಯ ಟೀಕೆಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಸರ್ಕಾರ ಇದೆ. ಇದೀಗ ಇಲ್ಲಿನ ಇತರ ರಾಜಕೀಯ ಪಕ್ಷಗಳು ಸರ್ಕಾರದ ವಿರೋಧ ಅಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಕಿಡಿಕಾರಿದ್ದಾರೆ. ಈ ಸರ್ಕಾರ ರಾಜ್ಯವನ್ನು " ಚೌಪತ್ ಪ್ರದೇಶ " (ಹಾಳು ರಾಜ್ಯ) ಆಗಿ ಪರಿವರ್ತಿಸಲಾಗಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಬಾಲಕಿಯ ಅತ್ಯಾಚಾರ ಪ್ರಕರಣ, ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ: ಕಮಲ್ ನಾಥ್
Kamal Nath Image Credit source: pinterest
Follow us
ಅಕ್ಷಯ್​ ಪಲ್ಲಮಜಲು​​
|

Updated on: Sep 30, 2023 | 10:59 AM

ಉಜ್ಜಯಿನಿ, ಸೆ.30: ದೇಶವನ್ನೇ ಬೆಚ್ಚಿಬೀಳಿಸಿದ ಮಧ್ಯಪ್ರದೇಶ (Madhya Pradesh) ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಸರ್ಕಾರ ಇದೆ. ಇದೀಗ ಇಲ್ಲಿನ ಇತರ ರಾಜಕೀಯ ಪಕ್ಷಗಳು ಸರ್ಕಾರದ ವಿರೋಧ ಅಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಕಿಡಿಕಾರಿದ್ದಾರೆ. ಈ ಸರ್ಕಾರ ರಾಜ್ಯವನ್ನು ” ಚೌಪತ್ ಪ್ರದೇಶ ” (ಹಾಳು ರಾಜ್ಯ) ಆಗಿ ಪರಿವರ್ತಿಸಲಾಗಿದೆ ಎಂದು ಹೇಳಿದ್ದಾರೆ. 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅತ್ಯಾಚಾರ ನಡೆದ ನಂತರ ಬಾಲಕಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು. ಆದರೆ ಯಾರು ಕೂಡ ಆಕೆಯ ಸಹಾಯ ಬಂದಿಲ್ಲ ಎಂದು ಹೇಳಲಾಗಿದೆ. ನಂತರ ಆಕೆ ಚರ್ಚ್​ ಗೇಟ್​​​ ಮುಂದೆ ಹೋಗಿ ಸಹಾಯ ಕೇಳಿದ್ದಾಳೆ. ಆಗಾ ಚರ್ಚ್​​ನ ಫಾದರ್​​ ಬಾಲಕಿಗೆ ಸಹಾಯ ಮಾಡಿದ್ದಾರೆ. ಫಾದರ್​​​ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದು ಪೊಲೀಸರು​​ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ. ಇದರ ಜತೆಗೆ ಪೊಲೀಸರು ಮಾನವೀಯ ಕೆಲಸವನ್ನು ಕೂಡ ಮಾಡಿದ್ದಾರೆ. ಆಕೆಯ ಆಸ್ಪತ್ರೆ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸರು ಮುಂದೆ ಬಂದಿದ್ದಾರೆ. ಇದರ ಜತೆಗೆ ಉಜ್ಜಯಿನಿ ಪೊಲೀಸ್​​ ಅಧಿಕಾರಿ ಅಜಯ್ ವರ್ಮಾ ಅವರು ಬಾಲಕಿಯನ್ನು ದತ್ತು ಪಡೆಯುದಾಗಿ ಹೇಳಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಮಲ್ ನಾಥ್ ಅವರು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಇಂತಹ ಅನೇಕ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಎಲ್ಲವನ್ನು ಸಮಾಜ ಮುಂದೆ ಮುಚ್ಚಿಡುತ್ತಿದ್ದಾರೆ. ಈ ರಾಜ್ಯವನ್ನು ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶ: ಹೇಯ ಕೃತ್ಯದ ನಡುವೆ ಮಾನವೀಯ ಕೆಲಸ ಮಾಡಿದ ಪೊಲೀಸರು, ಅತ್ಯಾಚಾರವಾದ ಬಾಲಕಿಯ ಜೀವನಕ್ಕೆ ಇವರೇ ಆಸರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು. ಪ್ರಮುಖ ಆರೋಪಿ ಆಟೋರಿಕ್ಷಾ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಎರಡನೇ ಆರೋಪಿ ಆಟೋರಿಕ್ಷಾ ಚಾಲಕನ ಸ್ನೇಹಿತನ ವಿರುದ್ಧ ಸಾಕ್ಷ್ಯವನ್ನು ಮುಚ್ಚಿಟ್ಟ ಆರೋಪವನ್ನೂ ಹೊರಿಸಲಾಗಿದೆ.

ಮಧ್ಯಪ್ರದೇಶದ ಉಜ್ಜಯಿನಿಯ ವಿಶೇಷ ನ್ಯಾಯಾಲಯವು ಆಟೋರಿಕ್ಷಾ ಚಾಲಕನ ಸ್ನೇಹಿತನ್ನು ಏಳು ದಿನಗಳ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ. ಪ್ರಮುಖ ಆರೋಪಿಯನ್ನು ಉಜ್ಜಯಿನಿಯಲ್ಲಿರುವ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ