ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನಿಗೆ ಬಟ್ಟೆ ಬಿಚ್ಚಿ ಥಳಿತ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್ ಶಿಕ್ಷಕನ್ನು ಜನರ ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ (ಸೆ.14) ತಿಳಿಸಿದ್ದಾರೆ.

ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನಿಗೆ ಬಟ್ಟೆ ಬಿಚ್ಚಿ ಥಳಿತ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 14, 2023 | 10:31 AM

ಇಂದೋರ್, ಸೆ.14: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್ ಶಿಕ್ಷಕನ್ನು ಜನರ ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಮಧ್ಯಪ್ರದೇಶ(Madhya Pradesh) ಇಂದೋರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ (ಸೆ.14) ತಿಳಿಸಿದ್ದಾರೆ. ಪೊಲೀಸ್​​ ಅಧಿಕಾರಿಗಳ ಪ್ರಕಾರ ಬುಧವಾರ ಬೆಳಗ್ಗೆ ತುಕೋಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಯಾದವ್ ಅವರು ಮಾಧ್ಯಮಗಳಿಗೆ ತಿಳಿಸಿರುವ ಪ್ರಕಾರ ನೀಟ್‌ಗೆ ತಯಾರಿ ನಡೆಸುತ್ತಿರುವ ಅಪ್ರಾಪ್ತ ಬಾಲಕಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದಳು. ಈ ಇನ್‌ಸ್ಟಿಟ್ಯೂಟ್‌ನ ಶಿಕ್ಷಕ ವಿವೇಕ್ ಎಂಬಾತ ಆಕೆಯನ್ನು ಕೆಫೆಗೆ ಕರೆದು ಸ್ಪರ್ಶಿಸಿ, ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ವಿಚಾರವನ್ನು ಹೊರಗೆ ಹೇಳಿದರೆ ಕೊಲ್ಲುವುದಾಗಿ ಮತ್ತೊಬ್ಬ ಶಿಕ್ಷಕ ಶೈಲೇಂದ್ರ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ;ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಸಂತ್ರಸ್ತೆಯ ದೂರಿನ ಮೇರೆಗೆ ಶಿಕ್ಷಕರ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಶಿಕ್ಷಕ ಶೈಲೇಂದ್ರನನ್ನು ವಿವಸ್ತ್ರಗೊಳಿಸಿ ಥಳಿಸಿ ಪೊಲೀಸ್ ಠಾಣೆಗೆ ಕರೆತಂದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Thu, 14 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ