ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನಿಗೆ ಬಟ್ಟೆ ಬಿಚ್ಚಿ ಥಳಿತ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್ ಶಿಕ್ಷಕನ್ನು ಜನರ ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ (ಸೆ.14) ತಿಳಿಸಿದ್ದಾರೆ.

ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನಿಗೆ ಬಟ್ಟೆ ಬಿಚ್ಚಿ ಥಳಿತ
ಸಾಂದರ್ಭಿಕ ಚಿತ್ರ

Updated on: Sep 14, 2023 | 10:31 AM

ಇಂದೋರ್, ಸೆ.14: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್ ಶಿಕ್ಷಕನ್ನು ಜನರ ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ (ಸೆ.14) ತಿಳಿಸಿದ್ದಾರೆ. ಪೊಲೀಸ್​​ ಅಧಿಕಾರಿಗಳ ಪ್ರಕಾರ ಬುಧವಾರ ಬೆಳಗ್ಗೆ ತುಕೋಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಯಾದವ್ ಅವರು ಮಾಧ್ಯಮಗಳಿಗೆ ತಿಳಿಸಿರುವ ಪ್ರಕಾರ ನೀಟ್‌ಗೆ ತಯಾರಿ ನಡೆಸುತ್ತಿರುವ ಅಪ್ರಾಪ್ತ ಬಾಲಕಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದಳು. ಈ ಇನ್‌ಸ್ಟಿಟ್ಯೂಟ್‌ನ ಶಿಕ್ಷಕ ವಿವೇಕ್ ಎಂಬಾತ ಆಕೆಯನ್ನು ಕೆಫೆಗೆ ಕರೆದು ಸ್ಪರ್ಶಿಸಿ, ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ವಿಚಾರವನ್ನು ಹೊರಗೆ ಹೇಳಿದರೆ ಕೊಲ್ಲುವುದಾಗಿ ಮತ್ತೊಬ್ಬ ಶಿಕ್ಷಕ ಶೈಲೇಂದ್ರ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ;ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಸಂತ್ರಸ್ತೆಯ ದೂರಿನ ಮೇರೆಗೆ ಶಿಕ್ಷಕರ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಶಿಕ್ಷಕ ಶೈಲೇಂದ್ರನನ್ನು ವಿವಸ್ತ್ರಗೊಳಿಸಿ ಥಳಿಸಿ ಪೊಲೀಸ್ ಠಾಣೆಗೆ ಕರೆತಂದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Thu, 14 September 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us