ಮಧ್ಯಪ್ರದೇಶ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಸಾವು
ಮಧ್ಯಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಪಲ್ಟಿಯಾಗಿ 13 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮದುವೆ ಸಮಾರಂಭ ಮುಗಿಸಿ ಮೆರವಣಿಗೆಯಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಓವರ್‌ಲೋಡ್ ಆಗಿದ್ದ ಕಾರಣ ಘಟನೆ ಸಂಭವಿಸಿದೆ.
ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್ಗಢದಲ್ಲಿ ನಡೆದಿದೆ. 15 ಮಂದಿ ಗಾಯಗೊಂಡಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಹೋಗಿದ್ದವರು ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದರು.
ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.
ಮತ್ತಷ್ಟು ಓದಿ: Crime News: ಗುಜರಾತ್ನಲ್ಲಿ 2 ಬಸ್‌ಗಳು ಡಿಕ್ಕಿ; ಮೂವರು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಮದುವೆ ಮೆರವಣಿಗೆಯಲ್ಲಿ 40 ರಿಂದ 50 ಜನರು ಸೇರಿದ್ದು, ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 40 ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ದೀಕ್ಷಿತ್ ತಿಳಿಸಿದ್ದಾರೆ.
ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿದ್ದರಿಂದ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿದ್ದರು, ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ