AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಗಲಾಟೆ, ಗೆಳೆಯನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಯುವತಿ

ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಒತ್ತಡ ಹೇರಿದ್ದಕ್ಕಾಗಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಗಲಾಟೆ, ಗೆಳೆಯನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಯುವತಿ
ದಿ ಕೇರಳ ಸ್ಟೋರಿ
Follow us
ನಯನಾ ರಾಜೀವ್
|

Updated on: May 23, 2023 | 7:55 AM

ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಒತ್ತಡ ಹೇರಿದ್ದಕ್ಕಾಗಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ ಯುವಕ-ಯುವತಿ ಜಗಳ ಮಾಡಿಕೊಂಡಿದ್ದು, ಬಳಿಕ ಯುವತಿ ದೂರು ನೀಡಲು ಮುಂದಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲವಂತದ ಧಾರ್ಮಿಕ ಮತಾಂತರವನ್ನು ನಿಷೇಧಿಸುವ ಕಾನೂನಿನಡಿಯಲ್ಲಿ ಬಂಧಿಸಲಾಗಿದೆ ಎಂದು ಖಜ್ರಾನಾ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ವರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರಿಬ್ಬರೂ ಆಪ್ತರಾದ ನಂತರ ಒಟ್ಟಿಗೆ ಇರಲು ಶುರು ಮಾಡಿದ್ದರು, ಆದರೆ ಆ ಯುವಕ ತನ್ನನ್ನು ಧರ್ಮ ಬದಲಾಯಿಸುವಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಯುವತಿ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ನಾನು ಮತ್ತು ಯುವಕ ಇತ್ತೀಚೆಗೆ ದಿ ಕೇರಳ ಸ್ಟೋರಿ ವೀಕ್ಷಿಸಲು ಹೋಗಿದ್ದೆವು ಎಂದು ಯುವತಿ ಹೇಳಿದ್ದಾರೆ. ಸಿನಿಮಾ ನೋಡಿ ಇಬ್ಬರ ನಡುವೆ ಜಗಳವಾಗಿದ್ದು, ಪ್ರಿಯಕರ ತನ್ನ ಮೇಲೆ ಹಲ್ಲೆ ನಡೆಸಿ ಬಿಟ್ಟು ಹೋಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಮೇ 19ರಂದು ದೂರು ದಾಖಲಿಸಿದ್ದಳು.

12ನೇ ತರಗತಿವರೆಗೆ ಓದಿರುವ ಯುವಕ ನಿರುದ್ಯೋಗಿಯಾಗಿದ್ದು, ಯುವತಿ ಉನ್ನತ ಶಿಕ್ಷಣ ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದಾಗ ಇಬ್ಬರೂ ಆತ್ಮೀಯರಾದರು. ಯುವಕನ ವಿರುದ್ಧ ಬಂದಿರುವ ಎಲ್ಲಾ ಆರೋಪಗಳ ಬಗ್ಗೆ ವಿವರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ದಿನೇಶ್ ವರ್ಮಾ ತಿಳಿಸಿದ್ದಾರೆ.

ಕೇರಳ ಸ್ಟೋರಿ ಬಹಳ ವಿವಾದಾತ್ಮಕ ಚಿತ್ರ. ಕೇರಳದ ಸುಮಾರು 32,000 ಯುವತಿಯರು ಮತಾಂತರಗೊಂಡು ಸಿರಿಯಾದಲ್ಲಿ ಐಸಿಸ್ ಸೇರಿದ್ದಾರೆ ಎಂಬುದು ಚಿತ್ರದ ಕಥಾವಸ್ತು. ದೇಶದ ವಿವಿಧ ಮೂಲೆಗಳಿಂದ ಚಿತ್ರದ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ