ಕಿರುಕುಳದ ದೂರು ನೀಡಿ ಕೆಲವೇ ದಿನಗಳಲ್ಲಿ ಯುವತಿಗೆ ಬೆಂಕಿ ಹಚ್ಚಿದ ಆರೋಪಿಯ ಮಗ

ವ್ಯಕ್ತಿಯೊಬ್ಬರು ಯುವತಿಗೆ ಕಿರುಕುಳ ನೀಡಿದ್ದಕ್ಕೆ ಆಕೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿಯ ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 7 ರಂದು ಯುವತಿ ದೂರು ನೀಡಿದ್ದರು, ಅವರು ಹೊಲದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆರೋಪಿ ಆಕೆಗೆ ಕಿರುಕುಳ ನೀಡಿದ್ದ.

ಕಿರುಕುಳದ ದೂರು ನೀಡಿ ಕೆಲವೇ ದಿನಗಳಲ್ಲಿ ಯುವತಿಗೆ ಬೆಂಕಿ ಹಚ್ಚಿದ ಆರೋಪಿಯ ಮಗ
ಆಸ್ಪತ್ರೆ Image Credit source: India Today
Follow us
ನಯನಾ ರಾಜೀವ್
|

Updated on: Oct 14, 2024 | 9:27 AM

ವ್ಯಕ್ತಿಯೊಬ್ಬರು ಯುವತಿಗೆ ಕಿರುಕುಳ ನೀಡಿದ್ದಕ್ಕೆ ಆಕೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿಯ ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 7 ರಂದು ಯುವತಿ ದೂರು ನೀಡಿದ್ದರು, ಅವರು ಹೊಲದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆರೋಪಿ ಆಕೆಗೆ ಕಿರುಕುಳ ನೀಡಿದ್ದ.

ಆತನನ್ನು ಬಂಧಿಸಿ ಅಕ್ಟೋಬರ್ 8ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಯುವತಿಯ ಕುಟುಂಬದವರಿಗೆ ಆತ ಬೆದರಿಕೆ ಹಾಕಿದ್ದ. ಶುಕ್ರವಾರ ಮಂಗೀಲಾಲ್ ಅವರ ಮಗ ಅರ್ಜುನ್ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಆಕೆ ತಪ್ಪಿಸಿಕೊಂಡು ಹೊರಗೆ ಬಂದಿದ್ದು, ಕೂಡಲೇ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಮಹಿಳೆಯನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಹದ ಶೇ.27ರಷ್ಟು ಭಾಗಕ್ಕೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಅರ್ಜುನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಫ್ಟ್‌ನಲ್ಲಿ ಮೈ ಮುಟ್ಟಿ ಕಿರುಕುಳ ಕೊಟ್ಟವನ ಗ್ರಹಚಾರ ಬಿಡಿಸಿದ ಮಹಿಳೆ ಹೆಚ್ಚಾಗಿ ಜನಜಂಗುಳಿ ಸ್ಥಳಗಳಲ್ಲಿ, ಬಸ್‌, ಟ್ರೈನ್‌ಗಳಲ್ಲಿ ಕೆಲ ಕಾಮುಕರು ಬೇಕು ಬೇಕಂತಲೇ ಹೆಣ್ಣು ಮಕ್ಕಳ ಮೈ ಮುಟ್ಟಿ ಅನುಚಿತವಾಗಿ ವರ್ತಿಸುತ್ತಿರುತ್ತಾರೆ. ಪ್ರತಿನಿತ್ಯ ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿದ್ದ ಒಂಟಿ ಮಹಿಳೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.

ಮತ್ತಷ್ಟು ಓದಿ: ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಇದರಿಂದ ಕೋಪಗೊಂಡ ಆ ದಿಟ್ಟ ಹೆಣ್ಣು ಆತನ ಖಾಸಗಿ ಅಂಗಕ್ಕೆ ಜಾಡಿಸಿ ಒದ್ದು ತಕ್ಕ ಶಾಸ್ತಿ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಆ ಮಹಿಳೆಯ ಈ ದಿಟ್ಟ ನಡೆಗೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಈ ಕುರಿತ ವಿಡಿಯೋವನ್ನು TheFigen_ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ತುಂಬಾ ಪರಿಪೂರ್ಣವಾದ ಕಿಕ್‌! ಮಹಿಳೆಯರೆಲ್ಲರೂ ಇದೇ ರೀತಿ ತಮ್ಮ ಸ್ವ-ರಕ್ಷಣೆಯನ್ನು ಮಾಡಿಕೊಳ್ಳಬೇಕು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಲಿಫ್ಟ್‌ ಒಳಗೆ ಪ್ರವೇಶಿಸಿದ ಒಂಟಿ ಮಹಿಳೆಯ ಮೈ ಮುಟ್ಟಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈತತನ್ನು ಹೀಗೆ ಬಿಟ್ರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರಲಾರದು ಎನ್ನುತ್ತಾ, ಆ ದಿಟ್ಟ ಮಹಿಳೆ, ಆತ ಇನ್ನೊಂದು ಬಾರಿ ಮೈ ಮುಟ್ಟಲು ಯತ್ನಿಸಿದಾಗ ಆತನ ಕಪಾಳಕ್ಕೆ ಬಾರಿಸಿ, ಖಾಸಗಿ ಅಂಗಕ್ಕೆ ಸರಿಯಾಗಿ ಒದ್ದು ಬುದ್ಧಿ ಕಲಿಸಿದ್ದಾಳೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ