AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು

ಮಧ್ಯಪ್ರದೇಶದ ಶಿವಪುರಿಯಲ್ಲಿ ಯೂಟ್ಯೂಬರ್ ರಚನಾ ಗುರ್ಜರ್ ಮನೆಯಲ್ಲಿ ನಡೆದ 8-10 ಲಕ್ಷ ರೂ. ಮೌಲ್ಯದ ಕಳ್ಳತನವು ಸಾಮಾಜಿಕ ಮಾಧ್ಯಮದಲ್ಲಿ ವೈಯಕ್ತಿಕ ಸಂಪತ್ತು ಪ್ರದರ್ಶನದ ಅಪಾಯಗಳನ್ನು ಎತ್ತಿ ತೋರಿಸಿದೆ. ಇನ್​ಸ್ಟಾಗ್ರಾಂನಲ್ಲಿ ಒಡವೆಗಳನ್ನು ಪೋಸ್ಟ್ ಮಾಡಿದ್ದೇ ಕಳ್ಳರಿಗೆ ಸುಳಿವು ನೀಡಿದೆ. ಈ ಘಟನೆ ಆನ್‌ಲೈನ್‌ನಲ್ಲಿ ಮಾಹಿತಿ ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸುವ ಮಹತ್ವವನ್ನು ತಿಳಿಸುತ್ತದೆ.

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು
ಮಹಿಳೆ
ನಯನಾ ರಾಜೀವ್
|

Updated on:Jun 08, 2026 | 3:06 PM

Share

ಶಿವಪುರಿ, ಜೂನ್ 08: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಸಂಪತ್ತು, ಐಷಾರಾಮಿ ಜೀವನಶೈಲಿ ಮತ್ತು ಆಭರಣ(Jewellery)ಗಳನ್ನು ಅತಿಯಾಗಿ ಪ್ರದರ್ಶಿಸುವುದು ಎಷ್ಟು ದೊಡ್ಡ ಅಪಾಯವನ್ನು ತಂದೊಡ್ಡಬಹುದು ಎಂಬುದಕ್ಕೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಭೀಕರ ಕಳ್ಳತನದ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲೆಯ ನರವರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹಾನಿ ಗ್ರಾಮದಲ್ಲಿ ವಾಸಿಸುವ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ಶನಿವಾರ ಬೆಳಗಿನ ಜಾವ ನುಗ್ಗಿದ ಮುಸುಕುಧಾರಿ ಕಳ್ಳರ ಗುಂಪೊಂದು ಸುಮಾರು 8 ರಿಂದ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿದೆ.

ಈ ಕಳ್ಳತನವು ಇಂಟರ್ನೆಟ್ ಬಳಕೆದಾರರಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾದ ಮಾಹಿತಿ ಹಂಚಿಕೊಳ್ಳುವಿಕೆಯ ಅಪಾಯಗಳ ಬಗ್ಗೆ ಗಂಭೀರ ಎಚ್ಚರಿಕೆಯ ಸಂದೇಶ ನೀಡಿದೆ. ಪೊಲೀಸ್ ದೂರಿನ ಪ್ರಕಾರ, ಶನಿವಾರ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ರಚನಾ ಗುರ್ಜರ್ ಮತ್ತು ಅವರ ಪತಿ ಊದಲ್ ಸಿಂಗ್ ಗುರ್ಜರ್ ಸೇರಿದಂತೆ ಕುಟುಂಬದ ಸದಸ್ಯರು ಗಾಢ ನಿದ್ರೆಯಲ್ಲಿದ್ದಾಗ ಕಳ್ಳರು ಕಾಂಪೌಂಡ್‌ನ ತಂತಿ ಬೇಲಿಯನ್ನು ಕತ್ತರಿಸಿ ಒಳನುಗ್ಗಿದ್ದಾರೆ.

ಕಳ್ಳರು ಮೊದಲು ದಂಪತಿ ಮಲಗಿದ್ದ ಕೋಣೆಯ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿದ್ದಾರೆ. ಇದರಿಂದಾಗಿ ಕುಟುಂಬಸ್ಥರು ಒಳಗೆ ಸಿಕ್ಕಿಬಿದ್ದು ಹೊರಬರಲಾರದ ಸ್ಥಿತಿ ನಿರ್ಮಾಣವಾಯಿತು. ಮನೆಯೊಳಗೆ ಸಿಸಿಟಿವಿ ಕ್ಯಾಮೆರಾಗಳಿರುವುದನ್ನು ಅರಿತಿದ್ದ ಮುಸುಕುಧಾರಿ ಕಳ್ಳರು, ತಮ್ಮ ಮುಖಗಳು ಕಾಣದಂತೆ ತಡೆಯಲು ಕ್ಯಾಮರಾವನ್ನು ಕೋಲಿನ ಸಹಾಯದಿಂದ ಮೇಲ್ಮುಖವಾಗಿ ತಿರುಗಿಸಿದ್ದಾರೆ.

ಅಲ್ಮೇರಾಗಳ ಬೀಗವನ್ನು ಮುರಿದು 1.91 ಲಕ್ಷ ರೂ. ನಗದು, ಚಿನ್ನದ ಮಂಗಳಸೂತ್ರ, ನಾಲ್ಕು ಚಿನ್ನದ ಉಂಗುರಗಳು, ಬೆಳ್ಳಿಯ ಒಡ್ಯಾಣ ಮತ್ತು ಮನೆಯಲ್ಲಿದ್ದ ಪ್ರಮುಖ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. ವಿಚಿತ್ರವೆಂದರೆ, ಕಳ್ಳರು ಹೋಗುವಾಗ ಮನೆಯಲ್ಲಿದ್ದ ಎನರ್ಜಿ ಡ್ರಿಂಕ್‌ನ (ರೆಡ್ ಬುಲ್) ಒಂದು ಇಡೀ ಪೆಟ್ಟಿಗೆಯನ್ನೂ ಸಹ ಹೊತ್ತೊಯ್ದಿದ್ದಾರೆ.

ಮತ್ತಷ್ಟು ಓದಿ: ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ

ಬೆಳಗ್ಗೆ 4 ಗಂಟೆಯ ಸುಮಾರಿಗೆ ರಚನಾ ಅವರು ನೀರು ಕುಡಿಯಲು ಎದ್ದಾಗ ಬಾಗಿಲು ಹೊರಗಿನಿಂದ ಲಾಕ್ ಆಗಿರುವುದು ಗೊತ್ತಾಗಿದೆ. ತಕ್ಷಣ ಅವರು ಫೋನ್ ಮೂಲಕ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಂಬಂಧಿಕರು ಮನೆಗೆ ಧಾವಿಸಿ ಬಂದು ಬಾಗಿಲು ತೆರೆದು ಅವರನ್ನು ರಕ್ಷಿಸಿದ್ದಾರೆ. ಹಾಗಾಗಿ ಎಂದೂ ಕೂಡ ನಿಮ್ಮ ವೈಯಕ್ತಿಕ ಮಾಹಿತಿಯಾಗಲೀ ಅಥವಾ ಒಡವೆ, ದುಡ್ಡಿನ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:05 pm, Mon, 8 June 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ