ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ದರೋಡೆಕೋರರು ನಡುರಸ್ತೆಯಲ್ಲಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ
ಗರ್ಭಿಣಿ

Updated on: May 05, 2024 | 11:08 AM

ದರೋಡೆ ಮಾಡಲು ಬಂದವರು ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿ(Pregnant)ಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಧೋಟಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. . ಕಾಜರವಾರದ ನಿವಾಸಿ ಶುಭಂ ಚೌಧರಿ ಅವರು ಪತ್ನಿ ರೇಷ್ಮಾ ಹಾಗೂ ಒಂದೂವರೆ ವರ್ಷದ ಪುತ್ರನೊಂದಿಗೆ ವಾಕಿಂಗ್‌ಗೆ ತೆರಳಿದ್ದರು.

ಪಟ್ಬಾಬಾದಿಂದ ಹಿಂದಿರುಗಿದ ನಂತರ, ಮದರ್ ತೆರೆಸಾ ನಗರದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಲು ಬೊಲೆರೋ ಕಾರಿನಲ್ಲಿ ಹೊರಟಿದ್ದಾಗ, ದಾರಿಯಲ್ಲಿ 3-4 ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಆಗ ಪ್ರತಿಭಟಿಸಲು ಮುಂದಾದ ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ಪತಿಯನ್ನೂ ಥಳಿಸಿದ್ದಾರೆ ಶುಭಂ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಶುಭಂ ತಲೆಗೆ ಇಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಆತನ ಪತ್ನಿಯ ಮಂಗಲಸೂತ್ರವನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಮಾಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರ ಪ್ರಕಾರ, ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ:ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?

ಘಟನೆಯ ಬಗ್ಗೆ ಶುಭಂ ಹಲವು ಮಂದಿಗೆ ಮಾಹಿತಿ ನೀಡಿದರು, ಅವರು ಸ್ಥಳಕ್ಕೆ ತಲುಪಿದರು ರೇಷ್ಮಾ ಅವರನ್ನು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಡರಾತ್ರಿಯವರೆಗೂ ಘಟನೆಯ ತನಿಖೆಯಲ್ಲಿ ನಿರತರಾಗಿದ್ದರು.

ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮಧೋಳ ಠಾಣೆ ಪ್ರಭಾರಿ ವಿಪಿನ್ ತಾಮ್ರಕರ ತಿಳಿಸಿದ್ದಾರೆ. ದುಷ್ಕರ್ಮಿಗಳ ಜೀಪ್‌ಗೆ ಶುಭಂ ಅವರ ಜೀಪ್ ಡಿಕ್ಕಿ ಹೊಡೆದಿದ್ದು, ಬಳಿಕ ವಿವಾದ ವಿಕೋಪಕ್ಕೆ ತಿರುಗಿ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದರೆ ರೇಷ್ಮಾ ಸಾವಿಗೆ ಕಾರಣ ತಿಳಿಯಲಿದೆ ಎಂದು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us