ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ

ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಮನಸ್ಸಿನ ಮೇಲೆ ಜಾಹೀರಾತು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Dec 04, 2020 | 3:21 PM

ಮದ್ರಾಸ್: ಟಿವಿ ಜಾಹೀರಾತುಗಳಲ್ಲಿ ಪ್ರಸಾರವಾಗುವ ಕಾಂಡೋಮ್​ ಜಾಹಿರಾತುಗಳ ಬಗ್ಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ. ಅಲ್ಲದೆ, ಈ ರೀತಿಯ ಜಾಹೀರಾತುಗಳು ಪೋರ್ನೋಗ್ರಫಿಗೆ ಸಮ ಎಂದೂ ಹೇಳಿದೆ.

ನ್ಯಾಯಮೂರ್ತಿ ಎನ್​ ಕಿರುಬಕರನ್​ ಹಾಗೂ ಬಿ ಪುಗಲೆಂದಿ ಅವರನ್ನೊಳಗೊಂಡ ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಹೀಗೆ ಕಳವಳ ವ್ಯಕ್ತಪಡಿಸಿದೆ. “ಬಹುತೇಕ ಎಲ್ಲ ಚಾನೆಲ್​ಗಳು ರಾತ್ರಿ 10 ಗಂಟೆಯ ನಂತರ ಕಾಂಡೋ​ಮ್​ ಮಾರಾಟವನ್ನು ಬೆಂಬಲಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ಕೆಲ ಜಾಹೀರಾತುಗಳು ನೀಲಿ ಚಿತ್ರಗಳಂತೆ ಕಾಣುತ್ತವೆ,” ಎಂದು ಛೀಮಾರಿ ಹಾಕಿದೆ.

ಈ ರೀತಿ ನಗ್ನತೆಯನ್ನು ಮುಕ್ತವಾಗಿ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂಥವರಿಗೆ ಶಿಕ್ಷೆ ನೀಡುವ ಅವಕಾಶ ಕೂಡ ಕಾನೂನಿನಲ್ಲಿದೆ. ಈ ರೀತಿಯ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಈ ರೀತಿಯ ಜಾಹೀರಾತುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿದೆ.

ಟಿವಿಗಳಲ್ಲಿ ಕಾಂಡೋಮ್​ ಜಾಹೀರಾತು ಪ್ರಸಾರ ಮಾಡುವ ವಿಚಾರದ ಬಗ್ಗೆ ಅನೇಕರು ಅಪಸ್ವರ ಎತ್ತಿದ್ದರು. ಅಲ್ಲದೆ, ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಕೆಲವರು ಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಇಂಥಕ್ಕೆಲ್ಲ ಕೋರ್ಟ್​ ನಿರ್ಬಂಧ ವಿಧಿಸಿದೆ.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ