AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Senthil Balaji: ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

 ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ(Senthil Balaji)ಗೆ ವೈದ್ಯಕೀಯ ಆಧಾರದಲ್ಲಿ ಜಾಮೀನು ನೀಡಲು ಮದ್ರಾಸ್ ಹೈಕೋರ್ಟ್​ ನಿರಾಕರಿಸಿದೆ. ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಜಿ ಜಯಚಂದ್ರನ್ ಗುರುವಾರ ಜಾಮೀನು ನಿರಾಕರಿಸಿದ್ದಾರೆ.

Senthil Balaji: ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ
ಸೆಂಥಿಲ್ ಬಾಲಾಜಿ
Follow us
ನಯನಾ ರಾಜೀವ್
|

Updated on: Oct 19, 2023 | 11:24 AM

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ(Senthil Balaji)ಗೆ ವೈದ್ಯಕೀಯ ಆಧಾರದಲ್ಲಿ ಜಾಮೀನು ನೀಡಲು ಮದ್ರಾಸ್ ಹೈಕೋರ್ಟ್​ ನಿರಾಕರಿಸಿದೆ. ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಜಿ ಜಯಚಂದ್ರನ್ ಗುರುವಾರ ಜಾಮೀನು ನಿರಾಕರಿಸಿದ್ದಾರೆ. ಬಾಲಾಜಿ ಅವರ ಆರೋಗ್ಯದ ಆಧಾರದ ಮೇಲೆ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು, ಅವರು ಶಸ್ತ್ರಚಿಕಿತ್ಸೆಯ ನಂತರದ ತೊಡಕುಗಳು ಮತ್ತು ತೊಂದರೆಗಳನ್ನು ಉಲ್ಲೇಖಿಸಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು.  ಜೂನ್ 14ರಂದು ಇಡಿಯಿಂದ ಬಂಧನಕ್ಕೊಳಗಾದ ಕೂಡಲೇ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇಡಿ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿದ ವಿವರವಾದ ಪ್ರತಿ ಅಫಿಡವಿಟ್‌ನಲ್ಲಿ ಸಚಿವ ವಿ ಸೆಂಥಿಲ್‌ಬಾಲಾಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಆದ್ದರಿಂದ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರು ಎಂಬ ಹೇಳಿಕೆಯನ್ನು ನಿರಾಕರಿಸಿದೆ.

ಅವರು ಆರೋಗ್ಯವಾಗಿದ್ದಾರೆ ಮತ್ತು ಅನಾರೋಗ್ಯವು ಜಾಮೀನು ಪಡೆಯುವ ತಂತ್ರವಾಗಿದೆ ಎಂದು ಇಡಿ ಹೇಳಿಕೆ ನೀಡಿತ್ತು. ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಚೆನ್ನೈನ ಪುಳಲ್ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಹಿಂದಿನ ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾಗ ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೂನ್ 14 ರಂದು ಅವರನ್ನು ಇಡಿ ಬಂಧಿಸಿತ್ತು.

ಮತ್ತಷ್ಟು ಓದಿ: Senthil Balaji: ಇಡಿ ಬಂಧನದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು

ವಿ ಸೆಂಥಿಲ್ ಅವರು ಕೆಲಸ ಕೊಡಿಸುವುದಕ್ಕೆ ಹಣ ಪಡೆದ ಆರೋಪ ಹೊತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಲವು ಪ್ರಕರಣದಲ್ಲಿ ಅವರು ತನಿಖೆಯಲ್ಲಿದ್ದಾರೆ. ತಮ್ಮ ವಿರುದ್ಧ ನಡೆಯುತ್ತಿರುವ ತನಿಖೆಯ ಮೇಲೆ ಪ್ರಭಾವ ಬೀರುವ ಮತ್ತು ಕಾನೂನು ಮತ್ತು ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸುಬಹದಾದ ಆತಂಕ ಇದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ