ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್

ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತಮಿಳುನಾಡಿನ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್​ ಹೈಕೋರ್ಟ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 12:39 PM

ಚೆನ್ನೈ, ಡಿ.21: ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ (Education Minister Ponmudi) ಅವರಿಗೆ 3 ವರ್ಷ ಕಾಲ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್​ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ ₹ 50 ಲಕ್ಷ ದಂಡ ವಿಧಿಸಿದೆ. ₹ 1.75 ಕೋಟಿ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಪೊನ್ಮುಡಿ (72) ಅವರು 2006 ರಿಂದ 2011 ರ ಅವಧಿಯಲ್ಲಿ ಅಂದರೆ ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಿನಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ 65.99% ಮೂಲ ಆದಾಯಕ್ಕಿಂತ ಹೆಚ್ಚು ಆದಾಯದ ಆಸ್ತಿಯನ್ನು ಸಂಗ್ರಹಿಸಿದರು ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಆದರೆ ಮಂಗಳವಾರ ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಸಾಬೀತಾಗಿದೆ.

ವಿಲ್ಲುಪುರಂನ ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪು ನೀಡಿರುವುದು ತಪ್ಪಾಗಿದೆ. ವಿಶ್ವಾಸಾರ್ಹ ಪುರಾವೆಗಳ ಲೋಪ ಹಾಗೂ ಸಾಕ್ಷ್ಯಗಳ ಕೊರತೆಯಿಂದ ಈ ತೀರ್ಪು ನೀಡಿದೆ ಎಂದು ಹೈಕೋರ್ಟ್​​​ ನ್ಯಾಯಮೂರ್ತಿ ಜಯಚಂದ್ರನ್ ಹೇಳಿದ್ದಾರೆ. ವಿಚಾರಣಾ ನ್ಯಾಯಾಲಯ ನೀಡಿದ ತೀರ್ಪುನ್ನು ಒಪ್ಪಲು ಸಾಧ್ಯವಿಲ್ಲ ಏಕೆಂದರೆ ಅಲ್ಲಿ ಸಾಕ್ಷ್ಯಗಳ ಕೊರತೆ ಇದೆ ಎಂದು ಎದ್ದು ಕಾಣುತ್ತಿದೆ. ಹಾಗೂ ಇದು ತಪ್ಪಾಗಿದೆ ಎಂದು ಹೈಕೋರ್ಟ್​​​ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸಚಿವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ: ಮದ್ರಾಸ್ ಹೈಕೋರ್ಟ್​ ಜಡ್ಜ್​ಗೆ ಸಿಜೆಐ ಶ್ಲಾಘನೆ

ಆರೋಪಿ-1 (ಪೊನ್ಮುಡಿ) ತನ್ನನ್ನು ಸಾರ್ವಜನಿಕ ಕ್ಷೇತ್ರದಲ್ಲಿ ತೋಡಗಿಸಿಕೊಂಡ ಕಾರಣ ಆರೋಪಿ -2 (ಪೊನ್ಮುಡಿ ಪತ್ನಿ) ಅವರ ಹೆಸರಿನಲ್ಲಿ ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಸಂಪಾದಿಸಿರುವುದು ತಪ್ಪು ಹಾಗೂ ಅದು ಅಕ್ರಮವಾಗಿದೆ. ಈ ಬಗ್ಗೆ ವಿಚಾರಣಾ ನ್ಯಾಯಾಲಯ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Thu, 21 December 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ