ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ರಸ್ತೆ ಅಪಘಾತದಲ್ಲಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಮದ್ರಾಸ್ ಹೈಕೋರ್ಟ್ ವಿಶೇಷ ಶಿಕ್ಷೆ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌
ಮದ್ರಾಸ್​ ಹೈಕೋರ್ಟ್
Follow us
| Updated By: ವಿವೇಕ ಬಿರಾದಾರ

Updated on:Sep 13, 2022 | 11:02 PM

ಚೆನ್ನೈ: ಕುಡಿದ ಅಮಲಿನಲ್ಲಿ (Drink and Drive) ಕಾರು ಚಲಾಯಿಸಿ ರಸ್ತೆ ಅಪಘಾತದಲ್ಲಿ (Accident) ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಮದ್ರಾಸ್ ಹೈಕೋರ್ಟ್ (Madras High Court) ವಿಶೇಷ ಶಿಕ್ಷೆ ನೀಡಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಯುವಕನಿಗೆ ನ್ಯಾಯಾಲಯ ಎರಡು ವಾರಗಳ ಕಾಲ ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಕರಪತ್ರಗಳನ್ನು ಹಂಚಬೇಕು ಎಂದು ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಆದೇಶ ನೀಡಿದ್ದಾರೆ.

ಕುಡಿದು ಗಾಡಿ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು. 25 ಸಾವಿರ ರೂಪಾಯಿ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ನೀಡಿದ ಮೇಲೆ ಜಾಮೀನು ನೀಡಲಾಗುತ್ತದೆ ಎಂದು ಸೈದಾಪೇಟ್​ IV ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಹೇಳಿದ್ದಾರೆ.

ಜಾಮೀನು ನೀಡುವುದನ್ನು ವಿರೋಧಿಸಿದ ಪ್ರತಿವಾದಿ ವಕೀಲರು ಆರೋಪಿಯು ಆಗಸ್ಟ್ 23 ರಂದು ಕುಡಿದ ಅಮಲಿನಲ್ಲಿ ವಾಹನವನ್ನು ದುಡುಕಿನ ಮತ್ತು ನಿರ್ಲಕ್ಷ್ಯದ ರೀತಿಯಲ್ಲಿ ಚಾಲನೆ ಮಾಡಿ ಮೂವರು ಪಾದಚಾರಿಗಳಿಗೆ ಗಾಯಗೊಳಿಸಿದ್ದಾನೆ ಎಂದು ವಾದಿಸಿದರು.

ಆದರೂ ಕೂಡ ಯುವಕ ತನ್ನ ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ಹಾಗೇ ಗಾಯಗೊಂಡ ಪಾದಾಚಾರಿಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರಿಂದ ನ್ಯಾಯಾಧೀಶರು ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ.

ಯುವಕ ಪ್ರತಿದಿನ ಎರಡು ವಾರಗಳ ಕಾಲ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಗತ್ಯವಿದ್ದಾಗ ಪೊಲೀಸರಗೆ ವರದಿ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Tue, 13 September 22

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​