ಲಖನೌ: ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್‌ಸ್ಟರ್, ಮಾಫಿಯಾ ಡಾನ್-ರಾಜಕಾರಣಿ ಅತಿಕ್ ಅಹ್ಮದ್, ಸಹೋದರ ಅಶ್ರಫ್ನನ್ನು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಅತಿಕ್ ಅಹ್ಮದ್ ಭದ್ರತೆ ಹೊಣೆ ಹೊತ್ತಿದ್ದ 17 ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಹಾಗೂ ಅತಿಕ್ ಶೂಟೌಟ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಇನ್ನು ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮೆಡಿಕಲ್ ಟೆಸ್ಟ್‌ಗೆ ಪೊಲೀಸರು ಕರೆದೊಯ್ದಿದ್ದಾಗ ಪ್ರಯಾಗ್‌ರಾಜ್‌ನ ಮೆಡಿಕಲ್ ಕಾಲೇಜು ಬಳಿ ಪೊಲೀಸರ ಎದುರೇ ಮೂವರು ಯುವಕರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಹತ್ಯೆ ಬಳಿಕ ಯುವಕರು ಸ್ಥಳದಲ್ಲೇ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸರು ಗುಂಡಿಕ್ಕಿ ಹತ್ಯೆಗೈದ ಮೂವರ ಗುರುತು ಪತ್ತೆ ಹಚ್ಚಿದ್ದು ಲವಲೇಶ್ ತಿವಾರಿ, ಸನ್ನಿ, ಅರುಣ್ ಮೌರ್ಯ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಪೊಲೀಸರು ಅತಿಕ್ ಅಹ್ಮದ್ ಪುತ್ರನನ್ನು ಎನ್‌ಕೌಂಟರ್ ಮಾಡಿದ್ದರು. ಅತಿಕ್ ಅಹ್ಮದ್ ಪುತ್ರನ ಅಂತ್ಯಕ್ರಿಯೆ ನಿನ್ನೆ ನೆರವೇರಿತ್ತು.
2006ರಲ್ಲಿ ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ದೋಷಿ ಎಂದು ಪ್ರಯಾಗರಾಜ್ ನ್ಯಾಯಾಲಯ ತೀರ್ಪು ನೀಡಿತ್ತು. ಉಮೇಶ್ ಪಾಲ್ ಅಪಹರಣ ಪ್ರಕರಣದಲ್ಲಿ ಅತೀಕ್ ಅಹ್ಮದ್, ಖಾನ್ ಸೌಲತ್ ಹನೀಫ್ ಮತ್ತು ದಿನೇಶ್ ಪಾಸಿ ಅವರಿಗೆ ಪ್ರಯಾಗ್‌ರಾಜ್‌ನಲ್ಲಿರುವ ಎಂಪಿ/ಎಂಎಲ್ಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೊಲೆ ಮತ್ತು ಅಪಹರಣ ಸೇರಿದಂತೆ ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಮಾಜಿ ಸಂಸದ ಮತ್ತು ಶಾಸಕ ಅತೀಕ್ ಅಹ್ಮದ್ ಎದುರಿಸುತ್ತಿದ್ದರು.
ಇದನ್ನೂ ಓದಿ: ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಲೈಫ್ ಉಪಕ್ರಮಕ್ಕಾಗಿ ಮೋದಿಯನ್ನು ಶ್ಲಾಘಿಸಿದ ಬ್ರಿಟನ್ ಸಂಸದ
ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ 2005 ರ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆಯ ಒಂದು ತಿಂಗಳ ನಂತರ ಅಹ್ಮದ್ಗೆ ಶಿಕ್ಷೆಯಾಗಿತ್ತು. ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಹಿಂಬದಿ ಸೀಟಿನಿಂದ ಹೊರಗಿಳಿಯುತ್ತಿದ್ದಾಗ ಉಮೇಶ್ ಪಾಲ್ನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆಗಿದ್ದ ಇಬ್ಬರು ಪೊಲೀಸ್ ಅಂಗರಕ್ಷಕರೂ ಶೂಟೌಟ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.
2005 ರ ಕೊಲೆಯಲ್ಲಿ ಉಮೇಶ್ ಪಾಲ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದ್ದರಿಂದ ಅತಿಕ್ ಅಹ್ಮದ್ ಹತ್ಯೆಗೈದಿದ್ದಾನೆ ಎಂದು ಯುಪಿ ಪೊಲೀಸರು ಹೇಳಿಕೆ ನೀಡಿದ್ದರು. 2006 ರಲ್ಲಿ, ಉಮೇಶ್ ಪಾಲ್ ಅವರು ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿದಾಗ ಬಂದೂಕು ತೋರಿಸಿ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದರು.
WATCH | पूरे यूपी में धारा 144 लागू होने के बाद सभी पुलिसकर्मियों की छुट्टी हुई रद्द@AshishSinghNews | @vivekstake | @sanjayjourno | https://t.co/p8nVQWYM7F
#BigBreaking #AtiqueAhmed #AshrafAhmed #UmeshPalCase #UttarPradesh #Prayagraj pic.twitter.com/LPsLaZo35R— ABP News (@ABPNews) April 15, 2023
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:16 am, Sun, 16 April 23