AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭ ಮೇಳವು ಎಲ್ಲಾ ಭಕ್ತರನ್ನು ಒಗ್ಗೂಡಿಸುವ ವಿಶಿಷ್ಟ ಸಂಗಮ: ದತ್ತಾತ್ರೇಯ ಹೊಸಬಾಳೆ

ಮಹಾಕುಂಭ ಮೇಳವು ಸನಾತನ ಸಂಸ್ಕೃತಿಯ ಜಾತ್ರೆಯಷ್ಟೇ ಅಲ್ಲ, ಭಕ್ತರ ವಿಶಿಷ್ಟ ಸಂಗಮ ಮತ್ತು ಸಂಕಲ್ಪದ ಮಹಾ ಹಬ್ಬ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘಟ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಮಾಜದಲ್ಲಿನ ಒಗ್ಗಟ್ಟಿನ ಶಕ್ತಿ, ಸಂತ ಸಮುದಾಯ ಹಾಗೂ ಸರ್ಕಾರದ ಸಂಘಟಿತ ಪಾತ್ರದಿಂದ ಮಾತ್ರ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯ ಎಂದು ಅವರು ಹೇಳಿದರು. ದತ್ತಾತ್ರೇಯ ಅವರು ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.

ಮಹಾಕುಂಭ ಮೇಳವು ಎಲ್ಲಾ ಭಕ್ತರನ್ನು ಒಗ್ಗೂಡಿಸುವ ವಿಶಿಷ್ಟ ಸಂಗಮ: ದತ್ತಾತ್ರೇಯ ಹೊಸಬಾಳೆ
ದತ್ತಾತ್ರೇಯ ಹೊಸಬಾಳೆ Image Credit source: NDTV
ನಯನಾ ರಾಜೀವ್
| Edited By: |

Updated on:Feb 10, 2025 | 6:13 PM

Share

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಸನಾತನ ಸಂಸ್ಕೃತಿಯ ಜಾತ್ರೆಯಷ್ಟೇ ಅಲ್ಲ, ಭಕ್ತರ ವಿಶಿಷ್ಟ ಸಂಗಮ ಮತ್ತು ಸಂಕಲ್ಪದ ಮಹಾ ಹಬ್ಬ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘಟ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಸಮಾಜದಲ್ಲಿನ ಒಗ್ಗಟ್ಟಿನ ಶಕ್ತಿ, ಸಂತ ಸಮುದಾಯ ಹಾಗೂ ಸರ್ಕಾರದ ಸಂಘಟಿತ ಪಾತ್ರದಿಂದ ಮಾತ್ರ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯ ಎಂದು ಅವರು ಹೇಳಿದರು. ದತ್ತಾತ್ರೇಯ ಅವರು ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಅವರು ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಸ್ತುತ ಕಾಲದಲ್ಲಿ ಹೊಸ ಪೀಳಿಗೆಯನ್ನು ಸನಾತನ ಧರ್ಮ, ಸಂಸ್ಕೃತಿ ಮತ್ತು ಅದರ ಮೌಲ್ಯಗಳೊಂದಿಗೆ ಸಂಪರ್ಕಿಸುವುದು ಮುಖ್ಯವಾಗಿದೆ. ದಕ್ಕಾಗಿ ಕುಟುಂಬ, ಸಮಾಜ ಮತ್ತು ಧಾರ್ಮಿಕ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಯುವಜನರಿಗೆ ಧರ್ಮ ಮತ್ತು ಸಂಸ್ಕೃತಿಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಅವರು ಸಂತ ಸಮುದಾಯ ಮತ್ತು ಸಾಮಾಜಿಕ ನಾಯಕತ್ವಕ್ಕೆ ಮನವಿ ಮಾಡಿದರು.

ಮತ್ತಷ್ಟು ಓದಿ: ಮಹಾಕುಂಭ ಮೇಳದಲ್ಲಿ 3 ದಿನಗಳ ಕಾಲ ಅಂತಾರಾಷ್ಟ್ರೀಯ ಪಕ್ಷಿ ಉತ್ಸವ

ಮಹಾ ಕುಂಭಮೇಳದಲ್ಲಿ ಭಕ್ತರ ಪ್ರವಾಹ ನಿರಂತರವಾಗಿ ಹರಿದು ಬರುತ್ತಿದೆ. ಗಂಗಾ, ಯಮುನಾ ಮತ್ತು ಅದೃಶ್ಯ ಸರಸ್ವತಿಯ ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಹಾಕುಂಭ ಮುಗಿಯಲು ಇನ್ನೂ 17 ದಿನಗಳು ಬಾಕಿ ಇವೆ, ಆದರೆ ಈ ಬಾರಿ ಸ್ನಾನ ಮಾಡುವವರ ಸಂಖ್ಯೆ 50 ಕೋಟಿ ದಾಟಬಹುದು ಎಂದು ಅಂದಾಜಿಸಲಾಗಿದೆ. ಶುಕ್ರವಾರವೇ ಈ ಸಂಖ್ಯೆ 40 ಕೋಟಿ ದಾಟಿತ್ತು.

ಮೂರು ಪ್ರಮುಖ ಅಮೃತ ಸ್ನಾನಗಳಾದ ಮಕರ ಸಂಕ್ರಾಂತಿ, ಮೌನಿ ಅಮಾವಾಸ್ಯೆ ಮತ್ತು ವಸಂತ ಪಂಚಮಿ ಪೂರ್ಣಗೊಂಡಿವೆ. ಇಷ್ಟೆಲ್ಲಾ ಆದರೂ ಭಕ್ತರ ಉತ್ಸಾಹ ಕಡಿಮೆಯಾಗಿಲ್ಲ. ಪ್ರತಿದಿನ ದೇಶ ಮತ್ತು ವಿದೇಶಗಳಿಂದ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಸಂಗಮಕ್ಕೆ ತಲುಪುತ್ತಿದ್ದಾರೆ. ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮತ್ತು ಸಾರಿಗೆ ಇಲಾಖೆ ಹೆಚ್ಚುವರಿ ರೈಲುಗಳು ಮತ್ತು ಬಸ್ಸುಗಳನ್ನು ಓಡಿಸಬೇಕಾಗಿದೆ.

ಜನಜಾತಿ ಸಮಾಗಮ, ಸಂತ ಸಮಾಗಮ ಕಾರ್ಯಕ್ರಮ

ನಮ್ಮ ವನವಾಸಿ ಸಮಾಜವು ಸನಾತನ ಹಿಂದೂ ಸಂಪ್ರದಾಯವನ್ನು ಸಂರಕ್ಷಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದೆ.ಬುಡಕಟ್ಟು ಪ್ರದೇಶದ ಸಂತರು ಈ ಜ್ಞಾನ-ಸಂಸ್ಕೃತಿ ಸಂಪ್ರದಾಯವನ್ನು ಉತ್ತೇಜಿಸಲು ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು. ಹಿಂದೂ ಸಮಾಜ ಉಳಿಯಬೇಕಾದರೆ ನಿಮ್ಮ ಪಾತ್ರ ಮುಖ್ಯವಾಗಿರುತ್ತದೆ. ಅದಕ್ಕಾಗಿ ಬುಡಕಟ್ಟು ಪ್ರದೇಶದ ಎಲ್ಲಾ ಸಂತರು ಕಲ್ಯಾಣ್ ಆಶ್ರಮವನ್ನು ಬೆಂಬಲಿಸುವ ಮೂಲಕ ಈ ಸನಾತನ ಸಂಸ್ಕೃತಿಯನ್ನು ಬಲಪಡಿಸಲು ಶ್ರಮಿಸಬೇಕು ಎಂದು ಹೇಳಿದರು. ಅವರು ಅಖಿಲ ಭಾರತೀಯ ವನವಾಸಿ ಕಲ್ಯಾಣ ಆಶ್ರಮ ಆಯೋಜಿಸಿದ್ದ ಜನಜಾತಿ ಸಮಾಗಮವು ಸಂತ ಸಮಾಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮ ಕೂಡ ಪ್ರಯಾಗರಾಜ್ ಮಹಾಕುಂಭದಲ್ಲಿಯೇ ನಡೆಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:52 am, Mon, 10 February 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ