ಮಹಾ ಕುಂಭ ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದ ಮಮತಾ ಬ್ಯಾನರ್ಜಿ; ಪವನ್ ಕಲ್ಯಾಣ್ ಟೀಕೆ
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಪ್ರಯಾಗರಾಜ್‌ನಲ್ಲಿ ಮಹಾಕುಂಭ ನಡೆಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚಿನ ಕಾಲ್ತುಳಿತದ ಸಾವುಗಳಿಂದ ಮಹಾಕುಂಭ 'ಮೃತ್ಯು ಕುಂಭ'ವಾಗಿ ಮಾರ್ಪಟ್ಟಿದೆ ಎಂದು ಕರೆದಿದ್ದಾರೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾಕುಂಭದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ಸಾವುಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಜನಸಂದಣಿಯ ಅಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾಕುಂಭವನ್ನು “ಮೃತ್ಯು ಕುಂಭ” ಎಂದು ಕರೆದಿರುವ ಮಮತಾ ಬ್ಯಾನರ್ಜಿ ವಿಐಪಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದ್ದರೂ, ಬಡವರಿಗೆ ಅಗತ್ಯ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ವೇಳೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, “ರಾಷ್ಟ್ರವನ್ನು ವಿಭಜಿಸಲು ಧರ್ಮವನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ. ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಕಾರ್ಯಕ್ರಮಕ್ಕೆ ಸರಿಯಾದ ಯೋಜನೆಯ ಕೊರತೆಯಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: Maha Kumbh 2025: ಮಹಾ ಕುಂಭಮೇಳದ ಕೊನೆಯ ಅಮೃತ ಸ್ನಾನ ಯಾವಾಗ? ಇನ್ನೆಷ್ಟು ದಿನಗಳಿವೆ?
“ಇದು ‘ಮೃತ್ಯು ಕುಂಭ’. ನಾನು ಮಹಾ ಕುಂಭವನ್ನು ಮತ್ತು ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ ಯಾವುದೇ ಸರಿಯಾದ ಪ್ಲಾನ್ ಮಾಡದೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಮಂತರು ಮತ್ತು ವಿಐಪಿಗಳಿಗೆ 1 ಲಕ್ಷ ರೂ.ಗಳವರೆಗೆ ಶಿಬಿರಗಳನ್ನು (ಟೆಂಟ್‌ಗಳು) ಪಡೆಯಲು ವ್ಯವಸ್ಥೆಗಳಿವೆ. ಆದರೆ ಬಡವರಿಗೆ, ಕುಂಭದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Kolkata: On #MahaKumbh2025, West Bengal CM Mamata Banerjee says, “This is ‘Mrityu Kumbh’…I respect Maha Kumbh, I respect the holy Ganga Maa. But there is no planning…How many people have been recovered?…For the rich, the VIP, there are systems available to get camps (tents)… pic.twitter.com/6T0SyHAh0e
— ANI (@ANI) February 18, 2025
ಶವಗಳನ್ನು ಮರಣೋತ್ತರ ಪರೀಕ್ಷೆಯಿಲ್ಲದೆ ಮಹಾಕುಂಭದಿಂದ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ. ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳುತ್ತಾರೆ ಮತ್ತು ಅವರಿಗೆ ಪರಿಹಾರವನ್ನು ನಿರಾಕರಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ದುರದೃಷ್ಟಕರ ಘಟನೆ; ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತದ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿ ತಕ್ಷಣವೇ ತಿರುಗೇಟು ನೀಡಿತು. ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಮಹಾಕುಂಭವನ್ನು ಮೃತ್ಯು ಕುಂಭ ಎಂದು ಹೇಳಿರುವುದನ್ನು ಹಿಂದೂಗಳ ಮೇಲಿನ ದಾಳಿ ಎಂದು ಕರೆದಿದ್ದಾರೆ. ಈ ಬಗ್ಗೆ ಜನರು ತೀವ್ರ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಮಹಾಕುಂಭ ‘ಮೃತ್ಯು ಕುಂಭ’ ಆಗಿದೆ ಎಂಬ ಹೇಳಿಕೆಯ ಕುರಿತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅದು ತುಂಬಾ ಅನ್ಯಾಯದ ಹೇಳಿಕೆ ಎಂದು ನಾನು ಭಾವಿಸುತ್ತೇನೆ. ನಮ್ಮ ನಾಯಕತ್ವದ ವಿಧಾನದಲ್ಲಿನ ಸಮಸ್ಯೆ ಎಂದರೆ ಸನಾತನ ಧರ್ಮ ಅಥವಾ ಹಿಂದೂ ಧರ್ಮದ ಬಗ್ಗೆ ಕಾಮೆಂಟ್ ಮಾಡುವುದು ತುಂಬಾ ಸುಲಭವೆಂದುಕೊಂಡಿರುವುದು. ಅವರು ಬೇರೆ ಯಾವುದೇ ಧರ್ಮದ ಬಗ್ಗೆ ಅದೇ ಮಟ್ಟದ ಟೀಕೆ ಮಾಡುವ ಧೈರ್ಯ ಮಾಡುವುದಿಲ್ಲ. ಈ ರೀತಿಯ ವಿಧಾನದಿಂದ ನಮಗೆ ಸಮಸ್ಯೆ ಇದೆ. ಅವರು ಕೋಟ್ಯಂತರ ಜನರ ಭಾವನೆಗಳನ್ನು ನೋಯಿಸುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ. ಲಕ್ಷಾಂತರ ಜನರು ಒಗ್ಗೂಡುವುದು ದೊಡ್ಡ ಕೆಲಸ. ಅದು ಯಾವುದೇ ಸರ್ಕಾರಕ್ಕಾದರೂ ಕಠಿಣ ಸವಾಲು. ಕೆಟ್ಟ ವಿಷಯಗಳು ಮತ್ತು ದುರದೃಷ್ಟಕರ ಘಟನೆಗಳು ಸಂಭವಿಸಬೇಕೆಂದು ನಾವು ಬಯಸುವುದಿಲ್ಲ. ಯೋಗಿ ಆದಿತ್ಯನಾಥ್ ಅವರ ಸರ್ಕಾರ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ನಾನು ಭಾವಿಸುತ್ತೇನೆ. ಅಂತಹ ವಿಷಯಗಳು ನಡೆಯುವುದು ದುರದೃಷ್ಟಕರ. ಇದು ಕಾಮೆಂಟ್ ಮಾಡಲು ಸರಿಯಾದ ಮಾರ್ಗವಲ್ಲ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
#WATCH | Prayagraj, UP: On West Bengal CM Mamata Banerjee’s ‘Mrityu Kumbh’ remark for #MahaKumbh2025, Andhra Pradesh Deputy CM Pawan Kalyan says, “I think that’s a very unfair comment…I think the problem in the approach of our leadership is it is very easy to comment on… pic.twitter.com/e4DIL1xGNu
— ANI (@ANI) February 18, 2025
ಜನವರಿ 29ರಂದು ಮಹಾ ಕುಂಭಮೇಳದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನಕ್ಕಾಗಿ ಸೇರಿದ್ದರಿಂದ ಅವ್ಯವಸ್ಥೆ ಉಂಟಾಗಿ ನೂಕುನುಗ್ಗಲಿನಿಂದ 30 ಜನರು ಸಾವನ್ನಪ್ಪಿದರು. ಅದಾದ ನಂತರ ಎರಡನೇ ಕಾಲ್ತುಳಿತ ಸಂಭವಿಸಿತ್ತು. ಆದರೆ, ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಬಳಿಕ ಮಹಾ ಕುಂಭಮೇಳಕ್ಕೆ ರೈಲು ಹತ್ತುವ ಧಾವಿಸಿ ಉಂಟಾದ ಕಾಲ್ತುಳಿತದಲ್ಲಿ ನವದೆಹಲಿ ರೈಲು ನಿಲ್ದಾಣದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:56 pm, Tue, 18 February 25