Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತೋಟಿಗೆ ಬಂದ ಮಹಾ ಕುಂಭಮೇಳ ಅಗ್ನಿ ದುರಂತ: ಯಾವುದೇ ಸಾವುನೋವುಗಳಾಗಿಲ್ಲ ಎಂದ ಎಡಿಜಿಪಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದೆ. 2-3 ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡು ಹಲವು ಕುಟೀರಗಳು ಸುಟ್ಟುಹೋಗಿವೆ. ಆದಾಗ್ಯೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದ್ದು, ತನಿಖೆ ನಡೆಸುವುದಾಗಿ ಎಡಿಜಿಪಿ ತಿಳಿಸಿದ್ದಾರೆ. ಸದ್ಗುರು ಜಗ್ಗಿ ವಾಸುದೇವ್ ಅವರು ನಿರ್ಲಕ್ಷ್ಯ ಮತ್ತು ಅತಿಯಾದ ಉತ್ಸಾಹ ಇಂತಹ ಘಟನೆಗಳಿಗೆ ಕಾರಣ ಎಂದು ಹೇಳಿದ್ದಾರೆ.

ಹತೋಟಿಗೆ ಬಂದ ಮಹಾ ಕುಂಭಮೇಳ ಅಗ್ನಿ ದುರಂತ: ಯಾವುದೇ ಸಾವುನೋವುಗಳಾಗಿಲ್ಲ ಎಂದ ಎಡಿಜಿಪಿ
ಹತೋಟಿಗೆ ಬಂದ ಮಹಾ ಕುಂಭಮೇಳ ಅಗ್ನಿ ದುರಂತ: ಯಾವುದೇ ಸಾವುನೋವುಗಳಾಗಿಲ್ಲ ಎಂದ ಎಡಿಜಿಪಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Jan 19, 2025 | 10:01 PM

ಉತ್ತರ ಪ್ರದೇಶ, ಜನವರಿ 19: ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ (Mahakumbh) ಮೇಳದಲ್ಲಿ ಭಾನುವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿತ್ತು. ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡಿದ್ದವು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಘಟನೆ ಬಗ್ಗೆ ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ಪ್ರತಿಕ್ರಿಯಿಸಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಭಾನು ಭಾಸ್ಕರ್, ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಹಾಗಾಗಿ ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ನಿಯಂತ್ರಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: ಸಿಲಿಂಡರ್​​ಗಳು ಸ್ಫೋಟ, ಹೊತ್ತಿ ಉರಿದ ಟೆಂಟ್​​ಗಳು

ಅಗ್ನಿ ಅವಘಡದಲ್ಲಿ ಯಾರಿಗೂ ಕೂಡ ಗಾಯಗಳಾಗಿಲ್ಲ. ಅಗ್ನಿ ಅವಘಡದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಆಗಲೇ ಅವಘಡ ಹೇಗೆ ಸಂಭವಿಸಿತು ಎಂಬುದನ್ನು ನಾವು ಹೇಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ನಿರ್ಲಕ್ಷ್ಯ, ಉತ್ಸಾಹವೇ ಇಂತಹ ಘಟನೆಗಳಿಗೆ ಕಾರಣ: ಸದ್ಗುರು 

ಇನ್ನು ಘಟನೆ ಕುರಿತಾಗಿ ಸದ್ಗುರು ಜಗ್ಗಿ ವಾಸುದೇವ್​ ಅವರು ಟ್ವೀಟ್​ ಮಾಡಿದ್ದು, ಒಂದೇ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದಾಗ, ನಿರ್ಲಕ್ಷ್ಯ ಮತ್ತು ಅತಿಯಾದ ಉತ್ಸಾಹದಿಂದಾಗಿ ಬೆಂಕಿ ಮತ್ತು ಕಾಲ್ತುಳಿತಗಳಂತಹ ಅವಘಡಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಸದ್ಗುರು ಟ್ವೀಟ್​

144 ವರ್ಷಗಳಿಗೊಮ್ಮೆ ನಡೆಯುವ ಈ ಅದ್ಭುತ ಮತ್ತು ಮಹತ್ವಪೂರ್ಣ ಕಾರ್ಯವನ್ನು ಹಾಳುಮಾಡುವುದು ಮತ್ತು ಅಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ಸಂಬಂಧಪಟ್ಟವರ, ಅಲ್ಲಿಗೆ ಹೋಗುವ ಎಲ್ಲಾ ಭಕ್ತರು ಮತ್ತು ಸಹಜವಾಗಿ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ಮಹಾಕುಂಭವು ಭಯಹುಟ್ಟಿಸುವ ಸ್ಥಳಕ್ಕಿಂತ ಹೆಚ್ಚಾಗಿ ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ವಿಕಾಸದ ಕೇಂದ್ರಬಿಂದುವಾಗಲಿ. ಬರೋಬ್ಬರಿ 144 ವರ್ಷಗಳ ಬಳಿಕ ನಡೆಯುತ್ತಿರುವ ಈ ಮಹಾಕುಂಭವನ್ನು ಯಶಸ್ಸು ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಸಿಎಂ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ

ಇನ್ನು ಘಟನಾ ಸ್ಥಳಕ್ಕೆ ಸಿಎಂ ಯೋಗಿ ಆದಿತ್ಯನಾಥ್​ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಿಎಂ ಆದಿತ್ಯನಾಥ್‌ಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Sun, 19 January 25

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್