ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ

|

Updated on: Jan 29, 2025 | 7:21 PM

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಇಂದು ಕಾಲ್ತುಳಿತ ಉಂಟಾಗಿದೆ. ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ, 60 ಭಕ್ತರು ಗಾಯಗೊಂಡಿದ್ದಾರೆ. 25 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಮೃತರಾದವರಲ್ಲಿ ಕರ್ನಾಟಕದ ನಾಲ್ವರು ಭಕ್ತರು ಕೂಡ ಸೇರಿದ್ದಾರೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ
Mahakumbh Stampede
Follow us on

ಪ್ರಯಾಗರಾಜ್: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದು, ಇದುವರೆಗೆ 25 ಮಂದಿ ಮೃತರನ್ನು ಗುರುತಿಸಲಾಗಿದೆ. ಉಳಿದ ಐವರ ಗುರುತುಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಈ ಘಟನೆಯಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಮಹಾ ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಮೃತರಾದವರ ಪೈಕಿ ನಾಲ್ವರು ಕರ್ನಾಟಕದವರು ಕೂಡ ಸೇರಿದ್ದಾರೆ.

ಪ್ರಯಾಗ್‌ರಾಜ್‌ ಕಾಲ್ತುಳಿತದ ಹೆಲ್ಪ್‌ಲೈನ್ ನಂಬರ್ 1920. ಮಹಾಕುಂಭ ಮೇಳಕ್ಕೆ ಧಾವಿಸಿದ ಭಕ್ತರ ಕುಟುಂಬದವರು ಹೆಲ್ಪ್‌ಲೈನ್ ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇಂದು ಮೌನಿ ಅಮಾವಾಸ್ಯೆಯಾದ್ದರಿಂದ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಾಗಿ ಆಗಮಿಸಿದ್ದರು. ಈ ವೇಳೆ ತ್ರಿವೇಣಿ ಸಂಗಮದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು.

ಇದನ್ನೂ ಓದಿ: ಮಹಾಕುಂಭ ಮೇಳ, ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ

ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬರು, ಗುಜರಾತ್‌ನ ಒಬ್ಬರು ಇದ್ದಾರೆ. ಕೆಲವು ಗಾಯಗೊಂಡ ಭಕ್ತರನ್ನು ಅವರ ಸಂಬಂಧಿಕರು ಕರೆದೊಯ್ದಿದ್ದಾರೆ. 36 ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ಹೇಳಿದರು.


8-10 ಕೋಟಿ ಭಕ್ತರು ಆಗಮಿಸುತ್ತಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಭ್ಯವಿರುವ ಎಲ್ಲಾ ಘಾಟ್‌ಗಳನ್ನು ಬಳಸುವಂತೆ ಮತ್ತು ಸಂಗಮ್ ನೋಸ್ ಕಡೆಗೆ ಧಾವಿಸದಂತೆ ಭಕ್ತರ ಬಳಿ ಅವರು ಮನವಿ ಮಾಡಿದ್ದಾರೆ. ಮಹಾಕುಂಭದಿಂದ ಹಿಂದಿರುಗುವ ಯಾತ್ರಿಕರಿಗೆ ಅಧಿಕಾರಿಗಳು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ