ಮಹಾಕುಂಭದಲ್ಲಿ ಕಾಲ್ತುಳಿತ; ಸಿಎಂ ಯೋಗಿ 25 ಲಕ್ಷ ರೂ. ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶ
ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
![ಮಹಾಕುಂಭದಲ್ಲಿ ಕಾಲ್ತುಳಿತ; ಸಿಎಂ ಯೋಗಿ 25 ಲಕ್ಷ ರೂ. ಪರಿಹಾರ ಘೋಷಣೆ, ನ್ಯಾಯಾಂಗ ತನಿಖೆಗೆ ಆದೇಶ](https://images.tv9kannada.com/wp-content/uploads/2025/01/yogi-adityanath-6.jpg?w=1280)
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಘೋಷಿಸಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾಗೇ, ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಿಎಂ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ದುರಂತ ಘಟನೆಯ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಮಹಾಕುಂಭ ಮೇಳದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮಹಾಕುಂಭ ಮೇಳ, ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ
#WATCH | On Mahakumbh stampede, Uttar Pradesh CM Yogi Adityanath says “The incident is heart-wrenching. We express our deepest condolences to all those families who lost their loved ones. We have been in constant touch with the administration since last night. The Mela Authority,… pic.twitter.com/3dsSeVxmOg
— ANI (@ANI) January 29, 2025
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಹಾಕುಂಭ ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು. ತನಿಖೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಹೇಳಿದ್ದೇವೆ. ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಪೊಲೀಸ್ ಮಹಾ ನಿರ್ದೇಶಕರಾದ ವಿ.ಕೆ ಗುಪ್ತಾ, ನಿವೃತ್ತ ಮೂವರು ಸದಸ್ಯರನ್ನೊಳಗೊಂಡ ಆಯೋಗ ರಚನೆ ಮಾಡಿದೆ.
ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ
ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬರು, ಗುಜರಾತ್‌ನ ಒಬ್ಬರು ಇದ್ದಾರೆ. ಕೆಲವು ಗಾಯಗೊಂಡ ಭಕ್ತರನ್ನು ಅವರ ಸಂಬಂಧಿಕರು ಕರೆದೊಯ್ದಿದ್ದಾರೆ. 36 ಗಾಯಾಳುಗಳು ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಂಭಮೇಳದ ಡಿಐಜಿ ವೈಭವ್ ಕೃಷ್ಣ ಹೇಳಿದರು. ಪ್ರಯಾಗ್‌ರಾಜ್ ಕಾಲ್ತುಳಿತದ ಹೆಲ್ಪ್‌ಲೈನ್ ನಂಬರ್ 1920. ಮಹಾಕುಂಭ ಮೇಳಕ್ಕೆ ಧಾವಿಸಿದ ಭಕ್ತರ ಕುಟುಂಬದವರು ಹೆಲ್ಪ್‌ಲೈನ್ ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ