Mahadev Jhulelal Temple: ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ, ಬಾವಿಗೆ ಬಿದ್ದ 30 ಮಂದಿ
ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 30 ಮಂದಿ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶ ಇಂದೋರ್‌ನ ಪಟೇಲ್ ನಗರದಲ್ಲಿ ನಡೆದಿದೆ.
ಇಂದೋರ್: ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 30 ಮಂದಿ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶ ಇಂದೋರ್‌ನ ಪಟೇಲ್ ನಗರದಲ್ಲಿ ನಡೆದಿದೆ. ಇದೀಗ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದಾರೆ. ಇಂದೋರ್‌ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ) ರಾಮನವಮಿ ಹಬ್ಬದ ಸಂದರ್ಭದಲ್ಲಿ ಕುಸಿದುಬಿದ್ದಿದ್ದು, ಸುಮಾರು 25 ಜನರು ಒಳಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಪುರಾತನ ಬಾವಡಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು ಮತ್ತು ಈ ಭಾರವನ್ನು ಹೊರಲು ಸಾಧ್ಯವಾಗದೆ ಅದು ಕುಸಿದಿದೆ ಎಂದು ಪಿಟಿಐ ವರದಿ ತಿಳಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಕುಸಿದ ಮೆಟ್ಟಿಲು ಬಾವಿಯಲ್ಲಿ ಸಿಲುಕಿರುವ ಭಕ್ತರನ್ನು ರಕ್ಷಿಸಲು ಪೊಲೀಸರು ಮತ್ತು ಸ್ಥಳೀಯರು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.
#WATCH | Madhya Pradesh: Many feared being trapped after a stepwell at a temple collapsed in Patel Nagar area in Indore.
Details awaited. pic.twitter.com/qfs69VrGa9
— ANI MP/CG/Rajasthan (@ANI_MP_CG_RJ) March 30, 2023
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಚೇರಿಯು ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದೋರ್ ಪೊಲೀಸ್ ಮತ್ತು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಭಕ್ತರನ್ನು ಸ್ಥಳಾಂತರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಅತ್ಯಾಚಾರವೆಸಗಿದ ಬಾಲಕಿಯ ಜೀವಹರಣ ಮಾಡದೆ ಬಿಟ್ಟಿದ್ದಾನೆ ಎಂದು ಅಪರಾಧಿಯ ಶಿಕ್ಷೆ ಕಡಿತಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್
ಮೆಟ್ಟಿಲುಬಾವಿಯಿಂದ ಒಟ್ಟು ಎಂಟು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು, ಜಿಲ್ಲಾಡಳಿತ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಹಲವಾರು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
Published On - 1:39 pm, Thu, 30 March 23