Mahakumbh 2025: ಕುಂಭಮೇಳದಿಂದ ಉತ್ತರ ಪ್ರದೇಶ ಗಳಿಸುವ ಆದಾಯವೆಷ್ಟು? ಸಿಎಂ ಯೋಗಿ ನೀಡಿದ ಮಾಹಿತಿ ಇಲ್ಲಿದೆ

ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ಮಹಾಕುಂಭ 2025 ರ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಂಗಮ ನಗರವು ಪ್ರಪಂಚದಾದ್ಯಂತದ ಭಕ್ತರನ್ನು ಪೂರ್ಣ ಉತ್ಸಾಹದಿಂದ ಸ್ವಾಗತಿಸಲು ಸಿದ್ಧವಾಗಿದೆ. ಈ ಬಾರಿ 40 ಕೋಟಿಗೂ ಹೆಚ್ಚು ಭಕ್ತರು ಪ್ರಯಾಗರಾಜ್ ಮಹಾಕುಂಭಕ್ಕೆ ಆಗಮಿಸುವ ಸಾಧ್ಯತೆ ಇದೆ.ಇದು ಭಾರತ ಸೇರಿದಂತೆ ಇಡೀ ಜಗತ್ತಿಗೆ ತನ್ನ ಪ್ರಾಚೀನ ಸಂಪ್ರದಾಯಗಳ ಬಗ್ಗೆ ಹೆಮ್ಮೆಪಡಲು ಮತ್ತು ಅದರ ಸಾಂಸ್ಕೃತಿಕ ಬೇರುಗಳನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

Mahakumbh 2025: ಕುಂಭಮೇಳದಿಂದ ಉತ್ತರ ಪ್ರದೇಶ ಗಳಿಸುವ ಆದಾಯವೆಷ್ಟು? ಸಿಎಂ ಯೋಗಿ ನೀಡಿದ ಮಾಹಿತಿ ಇಲ್ಲಿದೆ
ಮಹಾಕುಂಭ
Follow us
ನಯನಾ ರಾಜೀವ್
|

Updated on: Jan 09, 2025 | 8:57 AM

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭ 2025 ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಪಂಚದಾದ್ಯಂತದ 40 ಕೋಟಿ ಭಕ್ತರನ್ನು ಸ್ವಾಗತಿಸಲು ನಗರವು ಸಜ್ಜಾಗಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ದೊಡ್ಡ ಮಟ್ಟದಲ್ಲಿ ಸಿದ್ಧತೆ ಆರಂಭಿಸಿದೆ. ಉತ್ತರ ಪ್ರದೇಶವು ಈ ಕುಂಭ ಮೇಳದಿಂದ ಗಳಿಸುವ ಆದಾಯವೆಷ್ಟು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಮಹಾಕುಂಭಕ್ಕೆ 40 ಕೋಟಿ ಭಕ್ತರು ಬರುವ ಸಾಧ್ಯತೆಯಿದೆ ಮತ್ತು ಇದು ಉತ್ತರ ಪ್ರದೇಶಕ್ಕೆ 2 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ ಎಂದು ಬಹಿರಂಗಪಡಿಸಿದ್ದಾರೆ.

ಮಹಾಕುಂಭವು ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ, ಇದು ಭಾರತ ಸೇರಿದಂತೆ ಇಡೀ ಜಗತ್ತಿಗೆ ತನ್ನ ಪ್ರಾಚೀನ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡಲು ಮತ್ತು ಅದರ ಸಾಂಸ್ಕೃತಿಕ ಬೇರುಗಳನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಮಹಾಕುಂಭವು ಭವ್ಯ, ದೈವಿಕ ಮತ್ತು ಡಿಜಿಟಲ್ ಆಗಿರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ತನ್ನ ಪ್ರಾಚೀನ ಪರಂಪರೆಯ ಬಗ್ಗೆ ಹೆಮ್ಮೆಪಡುತ್ತಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ಈ ಬಾರಿಯ ಮಹಾಕುಂಭ ಭವ್ಯ, ದಿವ್ಯ ಮತ್ತು ಡಿಜಿಟಲ್ ಆಗಲಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಮಹಾಕುಂಭಕ್ಕೂ ಮುನ್ನ ಸನ್ಯಾಸಿನಿ ದೀಕ್ಷೆ ಪಡೆದ 13 ವರ್ಷದ ಬಾಲಕಿ

1.5 ಲಕ್ಷಕ್ಕೂ ಹೆಚ್ಚು ಸ್ವಚ್ಛ ಮತ್ತು ಪರಿಸರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ಗಂಗಾ ಮತ್ತು ಯಮುನಾ ನದಿಗೆ ಯಾವುದೇ ರೀತಿಯ ಕೊಳಕು ನೀರು ಸೇರದಂತೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯಕ್ಕೆ ಭಕ್ತರು ಬಂದಾಗ ಸಾರಿಗೆ, ವಸತಿ, ಊಟ ಸೇರಿದಂತೆ ಇನ್ನಿತರ ಕೆಲಸಗಳಿಗೆ ಹಣ ಖರ್ಚು ಮಾಡುತ್ತಾರೆ. ಇದು ಸ್ಥಳೀಯ ವ್ಯಾಪಾರ ಮತ್ತು ಉದ್ಯೋಗವನ್ನು ಉತ್ತೇಜಿಸುತ್ತದೆ. 2024 ರಲ್ಲಿ 16 ಕೋಟಿಗೂ ಹೆಚ್ಚು ಜನರು ಕಾಶಿ ವಿಶ್ವನಾಥನ ದರ್ಶನ ಪಡೆದಿದ್ದಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ಅದೇ ಸಮಯದಲ್ಲಿ, ಜನವರಿ 2024 ರಿಂದ ಸೆಪ್ಟೆಂಬರ್ ವರೆಗೆ 13 ಕೋಟಿ 55 ಲಕ್ಷಕ್ಕೂ ಹೆಚ್ಚು ಜನರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು ಗುರುವಾರ ಪ್ರಯಾಗರಾಜ್‌ನ ಮಹಾಕುಂಭ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಸಿಎಂ ಯೋಗಿ ಸಂತ ಸಮಾಜವನ್ನು ಭೇಟಿ ಮಾಡಿ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ. ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಕುಂಭಮೇಳ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್