AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahakumbh Stampede: ವಿವಿಐಪಿ ಪಾಸ್ ರದ್ದು, ಕಾಲ್ತುಳಿತದ ಬಳಿಕ ಮಹಾಕುಂಭದಲ್ಲಿ ಹಲವು ಬದಲಾವಣೆ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಘಟನೆ ಬಳಿಕ ಜಿಲ್ಲಾಡಳಿತವು ಹಲವು ಬದಲಾವಣೆಗಳನ್ನು ಮಾಡಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸುವುದರ ಜತೆಗೆ ಒಳಗೆ ಯಾವುದೇ ವಾಹನಗಳಿಗೂ ಅವಕಾಶವಿಲ್ಲ ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ನೀಡಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ.

Mahakumbh Stampede: ವಿವಿಐಪಿ ಪಾಸ್ ರದ್ದು, ಕಾಲ್ತುಳಿತದ ಬಳಿಕ ಮಹಾಕುಂಭದಲ್ಲಿ ಹಲವು ಬದಲಾವಣೆ
ಮಹಾಕುಂಭ ಮೇಳ
ನಯನಾ ರಾಜೀವ್
|

Updated on:Jan 30, 2025 | 10:47 AM

Share

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ. ಸಂಪೂರ್ಣ ವಾಹನ ರಹಿತ ವಲಯವಾಗಿದ್ದು, ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ- ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ. ರಸ್ತೆಗಳು ಏಕಮುಖ – ಭಕ್ತರ ಸುಗಮ ಸಂಚಾರಕ್ಕಾಗಿ ಏಕಮುಖ ರಸ್ತೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮತ್ತಷ್ಟು ಓದಿ: ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ

ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಪ್ರಯಾಗ್‌ರಾಜ್‌ಗೆ ಹೊಂದಿಕೊಂಡಿರುವ ಜಿಲ್ಲೆಗಳಿಂದ ಬರುವ ವಾಹನಗಳನ್ನು ಜಿಲ್ಲೆಯ ಗಡಿಯಲ್ಲಿ ನಿಲ್ಲಿಸಲಾಗುತ್ತಿದೆ. ಫೆಬ್ರವರಿ 4 ರವರೆಗೆ ಕಟ್ಟುನಿಟ್ಟಿನ ನಿರ್ಬಂಧಗಳು – ನಗರದಲ್ಲಿ ನಾಲ್ಕು ಚಕ್ರಗಳ ವಾಹನಗಳ ಪ್ರವೇಶಕ್ಕೆ ಸಂಪೂರ್ಣ ನಿಷೇಧವಿದೆ.

ಕುಂಭ ಪ್ರದೇಶದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸುವುದು ಈ ಬದಲಾವಣೆಗಳ ಉದ್ದೇಶವಾಗಿದೆ. ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಪ್ರಯಾಗ್​ರಾಜ್, ಕೌಶಂಬಿ, ವಾರಣಾಸಿ, ಅಯೋಧ್ಯೆ, ಮಿರ್ಜಾಪುರ, ಬಸ್ತಿ, ಜಾನ್‌ಪುರ್, ಚಿತ್ರಕೂಟ, ಬಂದಾ, ಅಂಬೇಡ್ಕರ್‌ನಗರ, ಪ್ರತಾಪಗಢ ಸೇರಿದಂತೆ ಹಲವು ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ತಡರಾತ್ರಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ರಸ್ತೆಗಳಲ್ಲಿ ನಡೆಸುತ್ತಿದ್ದರೆ, ಅವರನ್ನು ಖಾಲಿ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಮೇಳಕ್ಕೆ ಭೇಟಿ ನೀಡುವ ಜನರನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಆದಿತ್ಯನಾಥ್ ಹೇಳಿದರು. ಪ್ರಯಾಗರಾಜ್‌ನ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದು, ತಮ್ಮ ಪವಿತ್ರ ಸ್ನಾನವನ್ನು ಮುಗಿಸಿ ಮನೆಗೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:46 am, Thu, 30 January 25

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್