ಮಹಾರಾಷ್ಟ್ರ: ಮಹಾಕುಂಭ ಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ
ಮಹಾಕುಂಭ ಮೇಳಕ್ಕೆಂದು ಭಕ್ತರನ್ನು ಹೊತ್ತು ಹೊರಟಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ನಿಲ್ದಾಣದಿಂದ ಹೊರಟ ಎರಡರಿಂದ ಮೂರು ಕಿಲೋಮೀಟರ್‌ಗಳ ನಂತರ ದಾಳಿ ನಡೆದಿದ್ದು, ಬಿ6 ಕೋಚ್‌ನ ಕಿಟಕಿಗಳಿಗೆ ಹಾನಿಯಾಗಿದೆ.
ಪ್ರಯಾಗ್ರಾಜ್ಗೆ ಮಹಾಕುಂಭ ಮೇಳಕ್ಕೆಂದು ಭಕ್ತರನ್ನು ಹೊತ್ತು ಹೊರಟಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಸೂರತ್‌ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಿದ್ದಾರೆ.
ರೈಲು ನಿಲ್ದಾಣದಿಂದ ಹೊರಟ ಎರಡರಿಂದ ಮೂರು ಕಿಲೋಮೀಟರ್‌ಗಳ ನಂತರ ದಾಳಿ ನಡೆದಿದ್ದು, ಬಿ6 ಕೋಚ್‌ನ ಕಿಟಕಿಗಳಿಗೆ ಹಾನಿಯಾಗಿದೆ. ಪ್ರಯಾಣಿಕರ ಪೈಕಿ ಹಲವರು ಪ್ರಯಾಗರಾಜ್‌ನಲ್ಲಿ ಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದರು.ತಮ್ಮ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಪ್ರಯಾಣಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊವು ರೈಲಿಗಾದ ಹಾನಿಯನ್ನು ತೋರಿಸಿದೆ. ಜಲಗಾಂವ್ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ಎಸೆದ ಪರಿಣಾಮ ಕಿಟಕಿ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ಓದಿ:Mahakumbh Mela 2025: ಇಂದಿನಿಂದ ಮಹಾಕುಂಭ ಮೇಳ ಆರಂಭ, 144 ವರ್ಷಗಳ ಬಳಿಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್
ವ್ಯಕ್ತಿಯನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ತಪತಿ ಗಂಗಾ ಎಕ್ಸ್‌ಪ್ರೆಸ್ ಕುಂಭಮೇಳಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಜನಪ್ರಿಯ ರೈಲು. ಇದೇ ರೀತಿಯ ಘಟನೆಗಳನ್ನು ತಡೆಗಟ್ಟಲು ಮತ್ತು ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಮಾರ್ಗದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ಪ್ರಯಾಣಿಕರಿಗೆ ಭರವಸೆ ನೀಡಿದ್ದಾರೆ.
The train full of Hindu devotees going to #MahaKumbh was attacked in Jalgaon. Some “miscreants” pelted stones at it.
Not a single Hindu festival or pilgrimage passes without facing an attack! pic.twitter.com/SfWu3w6d0G
— Mr Sinha (@MrSinha_) January 12, 2025
30-45 ದಿನಗಳ ಕಾಲ ನಡೆಯುವ ಮಹಾಕುಂಭವು ಹಿಂದೂಗಳಿಗೆ ಹೆಚ್ಚಿನ ಮಹತ್ವವನ್ನು ಹೊಂದಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಪೂರ್ಣಿಮಾ ತಿಥಿಯು ಜನವರಿ 13 ರಂದು ಅಂದರೆ ಇಂದು ಬೆಳಗ್ಗೆ 5:03 ಕ್ಕೆ ಪ್ರಾರಂಭವಾಗಿದೆ ಮತ್ತು ತಿಥಿ ಜನವರಿ 14 ರಂದು ಬೆಳಗ್ಗೆ 3:56 ಕ್ಕೆ ಕೊನೆಗೊಳ್ಳುತ್ತದೆ.
ಈ ಕುಂಭ ಮೇಳವು 144 ವರ್ಷಗಳ ಬಳಿಕ ನಡೆಯುತ್ತಿದೆ. ಈ ಸಮಯದಲ್ಲಿ ದೇವತೆಗಳು ಮತ್ತು ರಾಕ್ಷಸರು ಅಮೃತಕ್ಕಾಗಿ ಹೋರಾಡಿದರು. ಈ ದಿನ, ಸೂರ್ಯ, ಚಂದ್ರ ಮತ್ತು ಗುರು ಗ್ರಹಗಳ ಮಂಗಳಕರ ಸ್ಥಾನವು ರೂಪುಗೊಳ್ಳುತ್ತಿದೆ, ಅದು ಆ ಸಮಯದಲ್ಲಿ ಸಮುದ್ರ ಮಂಥನದ ಸಮಯದಲ್ಲಿ ರೂಪುಗೊಂಡಿತು. ಅಲ್ಲದೇ ಮಹಾಕುಂಭದಂದು ರವಿಯೋಗ ಕೂಡ ಆಗಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ