AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ 4 ಗಂಟೆಗೆ ಎದ್ದು ಮನೆ ಮನೆಗೆ ದಿನಪತ್ರಿಕೆ ಹಂಚುತ್ತಿದ್ದ ದಿವ್ಯಾಂಗನಿಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆ ಕೊಟ್ಟ ಮಹಾನ್ ಆರ್ಯಮನ್ ಸಿಂಧಿಯಾ

ಮಹಾನ್ ಆರ್ಯಮನ್ ಸಿಂಧಿಯಾ ಅವರು ದಿವ್ಯಾಂಗ ಪತ್ರಿಕೆ ವಿತರಕ ರಾಧೆ ಬಾಥಮ್‌ಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆಯಾಗಿ ನೀಡಿದ್ದಾರೆ. ಬೆಳಗ್ಗೆ 4 ಗಂಟೆಗೆ ಸೈಕಲ್‌ನಲ್ಲಿ ಪತ್ರಿಕೆ ಹಂಚುತ್ತಿದ್ದ ಅವರ ಕಷ್ಟದ ವಿಡಿಯೋ ನೋಡಿ ಸಿಂಧಿಯಾ ಈ ನೆರವು ನೀಡಿದ್ದಾರೆ. ಇದು ಬಾಥಮ್ ಅವರ ದೈನಂದಿನ ಜೀವನವನ್ನು ಸುಗಮಗೊಳಿಸುತ್ತದೆ. ಸಿಂಧಿಯಾ ದೀಪಾವಳಿ ಸಂದರ್ಭದಲ್ಲಿ ಇತರ ದಿವ್ಯಾಂಗರಿಗೂ ನೆರವು ನೀಡಿದ್ದಾರೆ.

ಬೆಳಗಿನ ಜಾವ 4 ಗಂಟೆಗೆ ಎದ್ದು ಮನೆ ಮನೆಗೆ ದಿನಪತ್ರಿಕೆ ಹಂಚುತ್ತಿದ್ದ ದಿವ್ಯಾಂಗನಿಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆ ಕೊಟ್ಟ ಮಹಾನ್ ಆರ್ಯಮನ್ ಸಿಂಧಿಯಾ
ಮಹಾಆರ್ಯಮನ್ ಸಿಂಧಿಯಾ
ನಯನಾ ರಾಜೀವ್
|

Updated on:Nov 12, 2026 | 2:32 PM

Share

ಶಿವಪುರಿ, ನವೆಂಬರ್ 12: ಅಂಗವೈಕಲ್ಯವಿದ್ದರೂ ಬದುಕಿನ ಹೋರಾಟದಲ್ಲಿ ಹಿಂದೆ ಸರಿಯದೆ ಕುಟುಂಬಕ್ಕಾಗಿ ದುಡಿಯುತ್ತಿರುವ ವ್ಯಕ್ತಿಗೆ ನೆರವಿನ ಹಸ್ತ ಚಾಚಿದ್ದಾರೆ  ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಮಹಾನ್ ಆರ್ಯಮನ್ ಸಿಂಧಿಯಾ. ಪ್ರತಿದಿನ ಬೆಳಗಿನ ಜಾವ ಸೈಕಲ್‌ನಲ್ಲಿ ಪತ್ರಿಕೆ ಹಂಚುತ್ತಿದ್ದ ಶಿವಪುರಿಯ ರಾಧೆ ಬಾಥಮ್‌ಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆಯಾಗಿ ನೀಡಿದ್ದಾರೆ. ಅವರ ಕಷ್ಟದ ವಿಡಿಯೋ ನೋಡಿ ಈ ಸಹಾಯ ಮಾಡಲು ಮುಂದಾಗಿದ್ದಾರೆ.

ಮಧ್ಯಪ್ರದೇಶದ ಶಿವಪುರಿಯಲ್ಲಿ ಬೆಳಗ್ಗೆ 4 ಗಂಟೆಗೆ ಎದ್ದು ಮನೆಮನೆಗೆ ದಿನ ಪತ್ರಿಕೆಗಳನ್ನು ಹಂಚುತ್ತಿದ್ದ ದಿವ್ಯಾಂಗರೊಬ್ಬರಿಗೆ  ಮಹಾಆರ್ಯಮನ್ ಸಿಂಧಿಯಾ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆಯಾಗಿ ನೀಡಿದ್ದಾರೆ. ರಾಧೆ ಬಾಥಮ್ ಎಂಬುವವರ ಕಷ್ಟವನ್ನು ತಿಳಿದು ಅವರಿಗೆ ನೆರವಾಗುವ ಉದ್ದೇಶದಿಂದ ಈ ಸಹಾಯ ಮಾಡಿದ್ದಾರೆ.

ರಾಧೆ ಬಾಥಮ್ ಅವರು ಸುಮಾರು 20 ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಿಂದ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಆದರೂ ಜೀವನದಲ್ಲಿ ಧೈರ್ಯ ಕಳೆದುಕೊಳ್ಳದೆ ಕುಟುಂಬವನ್ನು ಸಾಕುತ್ತಿದ್ದಾರೆ. ಪ್ರತಿದಿನ ಬೆಳಗಿನ ಜಾವ 4 ಗಂಟೆಗೆ ಎದ್ದು ಸೈಕಲ್‌ನಲ್ಲಿ ಮನೆಮನೆಗೆ ಪತ್ರಿಕೆಗಳನ್ನು ತಲುಪಿಸುತ್ತಾರೆ.

ಬಾಥಮ್ ಅವರು ಸೈಕಲ್‌ನಲ್ಲಿ ಪತ್ರಿಕೆ ವಿತರಿಸುವಾಗ ಎದುರಿಸುತ್ತಿರುವ ಕಷ್ಟಗಳ ವಿಡಿಯೋ ಮಹಾಆರ್ಯಮನ್ ಸಿಂಧಿಯಾ ಅವರ ಗಮನಕ್ಕೆ ಬಂದಿತ್ತು. ಈ ವಿಡಿಯೋ ನೋಡಿದ ಬಳಿಕ ಅವರಿಗೆ ಸಹಾಯ ಮಾಡಲು ನಿರ್ಧರಿಸಿದ ಸಿಂಧಿಯಾ, ದೀಪಾವಳಿಯ ನಂತರ ಎಲೆಕ್ಟ್ರಿಕ್ ಸ್ಕೂಟರ್ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ:

ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು

ಶಿವಪುರಿಯಲ್ಲಿ ಸ್ಕೂಟರ್ ಹಸ್ತಾಂತರಿಸುವ ಸಂದರ್ಭದಲ್ಲಿ ಸಿಂಧಿಯಾ ಅವರು ಬಾಥಮ್ ಮತ್ತು ಅವರ ಕುಟುಂಬದೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿದರು. ಈ ಸ್ಕೂಟರ್‌ನಿಂದ ಪತ್ರಿಕೆ ವಿತರಣೆ ಸುಲಭವಾಗಲಿದೆ ಎಂದು ಹೇಳಿದರು. ಅಷ್ಟೇ ಅಲ್ಲ, ವಾಹನದ ವಿಮೆ ಸೇರಿದಂತೆ ಅಗತ್ಯ ವೆಚ್ಚಗಳನ್ನೂ ತಾವೇ ಭರಿಸುವುದಾಗಿ ಭರವಸೆ ನೀಡಿದರು.

ಸ್ಕೂಟರ್ ಓಡಿಸಲು ಚಾಲನಾ ಪರವಾನಗಿ ಅಗತ್ಯವಿಲ್ಲ ಎಂದೂ ಬಾಥಮ್ ಅವರಿಗೆ ತಿಳಿಸಿದರು. ಶೀಘ್ರದಲ್ಲೇ ಶಿವಪುರಿಗೆ ಭೇಟಿ ನೀಡಿ, ಹೊಸ ಸ್ಕೂಟರ್‌ನಲ್ಲಿ ಅವರೊಂದಿಗೆ ಸವಾರಿ ಮಾಡುವ ಆಸೆಯನ್ನೂ ವ್ಯಕ್ತಪಡಿಸಿದರು. ಈ ನೆರವಿನಿಂದ ರಾಧೆ ಬಾಥಮ್ ಸಂತಸ ವ್ಯಕ್ತಪಡಿಸಿ ಸಿಂಧಿಯಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ದೀಪಾವಳಿ ಸಂದರ್ಭದಲ್ಲಿ ಸಿಂಧಿಯಾ ಅವರು ಗ್ವಾಲಿಯರ್ ವಿಭಾಗದ ಹಲವು ಕ್ರೀಡಾಪಟುಗಳಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮತ್ತು ಸ್ವಯಂಚಾಲಿತ ವೀಲ್‌ಚೇರ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ದಿವ್ಯಾಂಗರು ಮತ್ತು ಅಗತ್ಯವಿರುವವರು ಹೆಚ್ಚು ಸ್ವತಂತ್ರವಾಗಿ ಬದುಕಲು ನೆರವಾಗುವುದು ಈ ಸಹಾಯದ ಉದ್ದೇಶ ಎಂದು ಪ್ರಕಟಣೆ ತಿಳಿಸಿದೆ.

ಮಹಾಆರ್ಯಮನ್ ಸಿಂಧಿಯಾ ಅವರು ದೀಪಾವಳಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೂ ನೆರವು ನೀಡಿದ್ದಾರೆ. ನವೆಂಬರ್ 8ರಂದು ಗ್ವಾಲಿಯರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಟು ಕ್ರಿಕೆಟಿಗರಿಗೆ ಕ್ರಿಕೆಟ್ ಕಿಟ್, ಆರ್ಥಿಕ ನೆರವು, ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಎಲೆಕ್ಟ್ರಿಕ್ ವೀಲ್‌ಚೇರ್‌ಗಳನ್ನು ವಿತರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:29 pm, Thu, 12 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ