AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಜೀವನ ಎಲ್ಲ ಭಾರತೀಯರಿಗೂ ಸ್ಫೂರ್ತಿ’; ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಉದ್ಯಮಿ ಮಹಾನಾರ್ಯಮಾನ್ ಸಿಂಧಿಯಾ

ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ಸೆಲೆಬ್ರಿಟಿಗಳು ಮತ್ತು ಯುವ ನಾಯಕರಿಂದ ಶುಭಾಶಯಳ ಮಹಾಪೂರವೇ ಹರಿದುಬರುತ್ತಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರ ಮಹಾನಾರ್ಯಮಾನ್ ಸಿಂಧಿಯಾ ಕೂಡ ಪ್ರಧಾನಿ ಮೋದಿಯವರಿಗೆ ತಮ್ಮ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅವರು ಪ್ರಧಾನಿಯವರೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶೇಷ ಸಂದೇಶವನ್ನು ಬರೆದಿದ್ದಾರೆ.

'ನಿಮ್ಮ ಜೀವನ ಎಲ್ಲ ಭಾರತೀಯರಿಗೂ ಸ್ಫೂರ್ತಿ'; ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಉದ್ಯಮಿ ಮಹಾನಾರ್ಯಮಾನ್ ಸಿಂಧಿಯಾ
ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮಹಾನಾರ್ಯಮಾನ್ ಸಿಂಧಿಯಾ
ಸುಷ್ಮಾ ಚಕ್ರೆ
|

Updated on:Sep 17, 2026 | 6:51 PM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬಕ್ಕೆ ದೇಶಾದ್ಯಂತ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ, ಯುವ ನಾಯಕ ಮಹಾನಾರ್ಯಮಾನ್ ಸಿಂಧಿಯಾ ಅವರು ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ್ದು, ಅವರ ಜೀವನವು ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಶೇಷ ಟ್ವೀಟ್ ಮಾಡಿದ್ದಾರೆ.

“ರಾಷ್ಟ್ರಕ್ಕೆ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೀವನವು ಪ್ರತಿಯೊಬ್ಬ ಭಾರತೀಯರಿಗೂ ರಾಷ್ಟ್ರೀಯ ಸೇವೆಯ ಹಾದಿಯಲ್ಲಿ ದಣಿವರಿಯಿಲ್ಲದೆ ಮತ್ತು ನಿರಂತರವಾಗಿ ಮುಂದುವರಿಯಲು ಒಂದು ದೊಡ್ಡ ಸ್ಫೂರ್ತಿಯಾಗಿದೆ. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಮಹಾನಾರ್ಯಮಾನ್ ಸಿಂಧಿಯಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Mahanaaryaman Scindia (1)

ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮಹಾನಾರ್ಯಮಾನ್ ಸಿಂಧಿಯಾ

ಮಹಾನಾರ್ಯಮಾನ್ ಸಿಂಧಿಯಾ ಭಾರತೀಯ ಉದ್ಯಮಿ, ಕ್ರೀಡಾ ಆಡಳಿತಗಾರ ಮತ್ತು ಗ್ವಾಲಿಯರ್‌ನ ರಾಜಮನೆತನಕ್ಕೆ ಸಂಬಂಧಿಸಿದ ವ್ಯಕ್ತಿ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರನೂ ಆಗಿರುವ ಮಹಾನಾರ್ಯಮಾನ್ ಸಿಂಧಿಯಾ ಡೆಹ್ರಾಡೂನ್‌ನ ಡೂನ್ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರೈಸಿದ್ದಾರೆ. ಬಳಿಕ, ಅಮೆರಿಕದ ಪ್ರತಿಷ್ಠಿತ ಯೇಲ್ ಯೂನಿವರ್ಸಿಟಿಯಿಂದ ಪದವಿ ಪಡೆದಿದ್ದಾರೆ. ನಂತರ ಎಂಡಿಐ ಗುರ್‌ಗಾಂವ್‌ನಿಂದ ಎಂಬಿಎ ಮುಗಿಸಿದ್ದಾರೆ.

ಇದನ್ನೂ ಓದಿ: 76 ವರ್ಷಕ್ಕೆ 76 ಕಪ್ ಚಹಾ ಫ್ರೀ: ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಅಭಿಮಾನ ಮೆರೆದ ಚಹಾ ವ್ಯಾಪಾರಿ

ಇವರು ‘ಮೈಮಂಡಿ’ ಎಂಬ ಬಿ೨ಬಿ ಸ್ಟಾರ್ಟಪ್​ನ ಸಹ-ಸಂಸ್ಥಾಪಕರಾಗಿದ್ದಾರೆ. ಈ ಸಂಸ್ಥೆಯು ತರಕಾರಿ ಮಾರಾಟಗಾರರು, ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯ ರೈತರಿಗೆ ಮಾರುಕಟ್ಟೆ ಹಾಗೂ ಪೂರೈಕೆ ಸರಪಳಿಯನ್ನು ಸುಲಭಗೊಳಿಸುವ ಕೆಲಸ ಮಾಡುತ್ತದೆ. ಹಾಗೇ, ಮಧ್ಯಪ್ರದೇಶದ ಕ್ರಿಕೆಟ್ ಆಡಳಿತದಲ್ಲಿ ಸಕ್ರಿಯವಾಗಿರುವ ಇವರು, ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 17 September 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್