ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವು, 80 ಮಂದಿ ಅಸ್ವಸ್ಥ

|

Updated on: Apr 15, 2024 | 9:00 AM

ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿ, 80 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಲೆ 400ಕ್ಕೂ ಅಧಿಕ ಮಂದಿ ಪ್ರಸಾದ ಸೇವಿಸಿದ್ದರು.

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವು, 80 ಮಂದಿ ಅಸ್ವಸ್ಥ
ಸಾವು
Image Credit source: India Today
Follow us on

ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿ, 80 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಲೆ 400ಕ್ಕೂ ಅಧಿಕ ಮಂದಿ ಪ್ರಸಾದ ಸೇವಿಸಿದ್ದರು.

ಅದರಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ 80 ಮಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಓರ್ವ ಸಾವನ್ನಪ್ಪಿದ್ದಾರೆ.
ಚಿಂತಾಜನಕ ಸ್ಥಿತಿಯಲ್ಲಿರುವ ಆರು ಮಂದಿಯನ್ನು ಚಂದ್ರಾಪುರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಮೃತ ವ್ಯಕ್ತಿಯನ್ನು ಗುರುಫೆನ್ ಯಾದವ್ ಎಂದು ಗುರುತಿಸಲಾಗಿದ್ದು ಅವರಿಗೆ ಇತರೆ ಆರೋಗ್ಯ ಸಮಸ್ಯೆಗಳಿದ್ದವು ಎಂದು ವೈದ್ಯರು ಹೇಳಿದ್ದಾರೆ. 24 ಮಂದಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಪ್ರಸಾದದಲ್ಲಿ ವಿಷಯಕಾರಿ ಅಂಶ ಏನಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: Viral News: ದೇವಾಲಯ ಧ್ವಂಸ ಮಾಡಲು ಬಂದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು

ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು
ದೇವಸ್ಥಾನದ (Temple) ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆಯ (Hoskote) ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತದುರ್ದೈವಿ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಳಿಯೊಗರೆ, ಪಾಯಸ, ಲಡ್ಡು ಸೇವಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ