ಮಹಾರಾಷ್ಟ್ರ: ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅಪ್ರಾಪ್ತರು ಸೇರಿ 24 ಮಂದಿ ಬಂಧನ

Rashmi Kallakatta

|

Updated on: Sep 23, 2021 | 8:05 PM

ಪೊಲೀಸರ ಪ್ರಕಾರ, 9 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಅಪ್ರಾಪ್ತ ವಯಸ್ಸಿನ ಆಕೆಯ ಸ್ನೇಹಿತ ಜನವರಿಯಲ್ಲಿ ಅತ್ಯಾಚಾರ ಮಾಡಿದ್ದಾನೆ.

ಮಹಾರಾಷ್ಟ್ರ: ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅಪ್ರಾಪ್ತರು ಸೇರಿ 24 ಮಂದಿ ಬಂಧನ
ಸಾಂಕೇತಿಕ ಚಿತ್ರ
Follow us

ಪುಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಳೆದ 8 ತಿಂಗಳಲ್ಲಿ 15 ವರ್ಷದ ಬಾಲಕಿಯನ್ನು ಇಬ್ಬರು ಅಪ್ರಾಪ್ತರು ಸೇರಿದಂತೆ 24 ಜನರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ.  ಬಾಲಕಿಯ ದೂರಿನ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, 22 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

“ಎಲ್ಲಾ ಆರೋಪಿಗಳನ್ನು ರಿಮಾಂಡ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಲ್ಯಾಣ್ ವಿಭಾಗ) ದತ್ತಾತ್ರಯ್ ಕರಾಳೆ ಹೇಳಿದರು.  ಪೊಲೀಸರ ಪ್ರಕಾರ, 9 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಅಪ್ರಾಪ್ತ ವಯಸ್ಸಿನ ಆಕೆಯ ಸ್ನೇಹಿತ ಜನವರಿಯಲ್ಲಿ ಅತ್ಯಾಚಾರ ಮಾಡಿದ್ದಾನೆ.

ಆರೋಪಿಗಳು ಈ ಕೃತ್ಯವನ್ನು ತಮ್ಮ ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿದ್ದಾರೆ ಮತ್ತು ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆತನ ಸ್ನೇಹಿತರು ಡೊಂಬಿವ್ಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆಯಂತಹ ವಿವಿಧ ಸ್ಥಳಗಳಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಒಟ್ಟು 33 ಜನರನ್ನು ಹೆಸರಿಸಿದ್ದಾರೆ ಮತ್ತು ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎಲ್ಲಾ ಆರೋಪಿಗಳು 16 ರಿಂದ 23 ವರ್ಷದೊಳಗಿನವರು.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯಿಂದ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ

ಇದನ್ನೂ ಓದಿ:  ಉತ್ತರ ಪ್ರದೇಶ: ಚಲಿಸುತ್ತಿದ್ದ ಬಸ್​ನಲ್ಲಿ 14ರ ಹರೆಯದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಂಡಕ್ಟರ್; ಸಂತ್ರಸ್ತೆಯ ಅಮ್ಮನಿಗೂ ಕಿರುಕುಳ

(Maharashtra 15-year-old girl was allegedly gangraped by 24 people two minors detained)

ತಾಜಾ ಸುದ್ದಿ

Related Stories

Click on your DTH Provider to Add TV9 Kannada