AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ 16 ಶಾಸಕರ ಅನರ್ಹತೆ ಪ್ರಕರಣ: ನಾಳೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ ಸಾಧ್ಯತೆ

ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳ ಕ್ರಾಸ್ ಅರ್ಜಿಗಳ ಬಗ್ಗೆ ವಿಚಾರಣೆ  ನಡೆಸಿದ ಸುಪ್ರೀಂಕೋರ್ಟ್  ಈ ವರ್ಷದ ಮಾರ್ಚ್‌ನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು

ಮಹಾರಾಷ್ಟ್ರದ 16 ಶಾಸಕರ ಅನರ್ಹತೆ ಪ್ರಕರಣ: ನಾಳೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟ ಸಾಧ್ಯತೆ
ಸುಪ್ರೀಂ ಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:May 10, 2023 | 4:17 PM

Share

ಮಹಾರಾಷ್ಟ್ರದ (Maharashtra) 16 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ತೀರ್ಪು ನಾಳೆ ಪ್ರಕಟಿಸುವ ಸಾಧ್ಯತೆ ಇದೆ. ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನೆಯ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ನ ತೀರ್ಪಿನ ಮುನ್ನ ಮಾತನಾಡಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಯಾವುದೇ ನಿರ್ಧಾರ ಹೊರಬಿದ್ದರೂ ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಬಹುಮತವಿದೆ ಎಂದು ಬುಧವಾರ ಹೇಳಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳ  ಅರ್ಜಿಗಳ ಬಗ್ಗೆ ವಿಚಾರಣೆ  ನಡೆಸಿದ ಸುಪ್ರೀಂಕೋರ್ಟ್  ಈ ವರ್ಷದ ಮಾರ್ಚ್‌ನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು, ಇದರಲ್ಲಿ ಠಾಕ್ರೆಯವರ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿದೆ.

ಲಂಡನ್‌ಗೆ ಭೇಟಿ ನೀಡುವ ಮುನ್ನ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ನರ್ವೇಕರ್, ನಾನು ಸ್ಪೀಕರ್ ಆದ ನಂತರ ಈ ಸರ್ಕಾರವು ವಿಶ್ವಾಸಮತ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ. ಯಾವುದೇ ನಿರ್ಧಾರ ಹೊರಬರಲಿ, ಸಂಖ್ಯಾಬಲದ ಮೇಲೆ ಈ ಸರ್ಕಾರಕ್ಕೆ ಬಹುಮತವಿದೆ ಎಂದು ನಾರ್ವೇಕರ್ ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ, ಶಿಂಧೆ ಮತ್ತು 39 ಶಾಸಕರು ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದರು, ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ (ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಸಹ ಒಳಗೊಂಡಿದೆ) ಪಕ್ಷದ ವಿಭಜನೆ ಮತ್ತು ಪತನಕ್ಕೆ ಕಾರಣವಾಯಿತು. ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿಂಧೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು.

ಇದನ್ನೂ ಓದಿ: ಕೆಲವರು ನಕಾರಾತ್ಮಕತೆಯನ್ನೇ ತುಂಬಿಕೊಂಡಿರುತ್ತಾರೆ: ರಾಜಸ್ಥಾನದಲ್ಲಿ ಮೋದಿ ವಾಗ್ದಾಳಿ

ಜೂನ್ 30, 2022 ರಂದು, ಶಿಂಧೆ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಜೆಪಿಯ ದೇವೇಂದ್ರ ಫಡ್ನವಿಸ್  ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Wed, 10 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ