ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಒಂದೇ ದಿನದಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ.ಇದಕ್ಕೆ ಔಷಧ ಹಾಗೂ ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ಆಸ್ಪತ್ರೆಯ ಡೀನ್ ಹೇಳಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಛತ್ರಪತಿ ಸಂಭಾಜಿನಗರ (ಔರಂಗಾಬಾದ್) ಜಿಲ್ಲೆಯ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ದಿಲೀಪ್ ಮಹೈಸೇಕರ್ ಹೇಳಿದರು. ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದೇನೆ ಎಂದರು.

ಮಗುImage Credit source: Freepik
Follow us
ನಯನಾ ರಾಜೀವ್
|

Updated on: Oct 03, 2023 | 7:56 AM

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ.ಇದಕ್ಕೆ ಔಷಧ ಹಾಗೂ ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ಆಸ್ಪತ್ರೆಯ ಡೀನ್ ಹೇಳಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಛತ್ರಪತಿ ಸಂಭಾಜಿನಗರ (ಔರಂಗಾಬಾದ್) ಜಿಲ್ಲೆಯ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ದಿಲೀಪ್ ಮಹೈಸೇಕರ್ ಹೇಳಿದರು. ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದೇನೆ ಎಂದರು.

ಮೃತಪಟ್ಟವರಲ್ಲಿ ಆರು ಮಹಿಳೆಯರು, ಆರು ಪುರುಷರು ಹಾಗೂ 12 ಶಿಶುಗಳು ಕೂಡ ಇವೆ. ನಮ್ಮದು ತೃತೀಯ ಆರೈಕೆ ಕೇಂದ್ರ ಎಂದು ತಿಳಿಸಿದರು, 70 ರಿಂದ 80 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಏಕೈಕ ಕೇಂದ್ರ ಇದಾಗಿದೆ. ಹಾಗಾಗಿ ದೂರದ ಊರುಗಳಿಂದ ರೋಗಿಗಳು ಬರುತ್ತಾರೆ. ಕೆಲವೇ ದಿನಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದು ಬಜೆಟ್ ಸೇರಿದಂತೆ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಮಹಾರಾಷ್ಟ್ರದ ಪ್ರತಿಪಕ್ಷಗಳು ರಾಜ್ಯದ ಏಕನಾಥ್ ಶಿಂಧೆ ಸರ್ಕಾರವನ್ನು ಟೀಕಿಸಿವೆ.

ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಯಿಂದ 12 ನವಜಾತ ಶಿಶುಗಳು ಸೇರಿದಂತೆ 24 ಜನರು ಸಾವನ್ನಪ್ಪಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ಹೇಳಿದರು. ಎಲ್ಲಾ ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಬಿಜೆಪಿ ಸರ್ಕಾರ ತನ್ನ ಪ್ರಚಾರಕ್ಕೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದರೂ ಮಕ್ಕಳ ಔಷಧಿಗೆ ಹಣವಿಲ್ಲವೇ? ಬಿಜೆಪಿಯ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ಓದಿ: ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ: ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ

ಆಸ್ಪತ್ರೆಯಲ್ಲಿ 500 ಹಾಸಿಗೆಗಳಿವೆ, ಆದರೆ ಪ್ರಸ್ತುತ ಸುಮಾರು 1,200 ರೋಗಿಗಳು ದಾಖಲಾಗಿದ್ದಾರೆ. ನಾನು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಅಜಿತ್ ಪವಾರ್ ಅವರೊಂದಿಗೆ ಮಾತನಾಡುತ್ತೇನೆ. ಖಾಸಗಿ ವೈದ್ಯರ ನೆರವು ಪಡೆಯಬಹುದು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದೇನೆ ಎಂದು ಅಶೋಕ್ ಚೌಹಾಣ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್