AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವು

ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Maharashtra: ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವು
ಮಕ್ಕಳ ಸಾವುImage Credit source: Shutterstock
ನಯನಾ ರಾಜೀವ್
|

Updated on:Jun 19, 2023 | 8:21 AM

Share

ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಗ್ಪುರ್​​​ ಜಿಲ್ಲೆಯ ಫಾರೂಖ್​ ನಗರದಲ್ಲಿ ಘಟನೆ ಸಂಭವಿಸಿದೆ, ಮಕ್ಕಳು ಆಟವಾಡಲು ಹೋಗಿದ್ದರು ಬಳಿಕ ನಾಪತ್ತೆಯಾಗಿದ್ದರು. 24 ಗಂಟೆಯ ಬಳಿಕ ಮನೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ, ಹಳೆಯ ಕಾರಿನಲ್ಲಿ ಆಟವಾಡುತ್ತಿದ್ದಾಗ ಡೋರ್​​ ಲಾಕ್​ ಆಗಿ ದುರಂತ ಸಂಭವಿಸಿದೆ.

ಕಾರಿನ ಡೋರ್​ ಲಾಕ್​​ ಆಗಿದ್ದರಿಂದ​ ಉಸಿರುಗಟ್ಟಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ, ಫಾರೂಖ್​ ನಗರದ ಪಂಚಪಾವಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಲಾಗಿತ್ತು, ಒಂದೇ ಮನೆಯ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಸಿರವಾರದಲ್ಲಿ ಅನುಮಾನಾಸ್ಪದವಾಗಿ ತಂದೆ, ಇಬ್ಬರು ಮಕ್ಕಳು ಸಾವು

ಫಾರುಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4), ಆಲಿಯಾ ಫಿರೋಜ್ ಖಾನ್ (6) ಮತ್ತು ಅಫ್ರಿನ್ ಇರ್ಷಾದ್ ಖಾನ್ (6) ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದರು.

ಪೋಷಕರು ಹತ್ತಿರದ ಫೀಲ್ಡ್​ಗೆ ಹೋಗಿರಬಹುದು ಎಂದುಕೊಂಡಿದ್ದರು. ರಾತ್ರಿವರೆಗೂ ಹಿಂದಿರುಗದಿದ್ದಾಗ ಪೊಲೀಸರನ್ನು ಸಂಪರ್ಕಿಸಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಎಸ್​ಯುವಿ ನಿಂತಿರುವುದ ಕಂಡರು ಕಾರಿನಲ್ಲಿ ಶವವಿರುವುದು ಬೆಳಕಿಗೆ ಬಂದಿದೆ. ತೌಫಿಕ್ ಮತ್ತು ಆಲಿಯಾ ಒಡಹುಟ್ಟಿದವರಾಗಿದ್ದು, ಅಫ್ರಿನ್ ಪಕ್ಕದ ಮನೆಯವರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:20 am, Mon, 19 June 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್