AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 300ಕ್ಕೂ ಹೆಚ್ಚು ಜನರು ಅಸ್ವಸ್ಥ

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿ 300 ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಿಂದಾಗಿ ರಸ್ತೆಯಲ್ಲೇ ಚಿಕಿತ್ಸೆ ನೀಡಲಾಯಿತು.

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 300ಕ್ಕೂ ಹೆಚ್ಚು ಜನರು ಅಸ್ವಸ್ಥ
Image Credit source: India Today
ನಯನಾ ರಾಜೀವ್
|

Updated on: Feb 21, 2024 | 2:14 PM

Share

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಒಂದು ವಾರದ ಧಾರ್ಮಿಕ ಕಾರ್ಯಕ್ರಮವಾದ ಹರಿಣಂ ಸಪ್ತಾಹದ ಕೊನೆಯ ದಿನದಂದು ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಬುಲ್ಧಾನ ಜಿಲ್ಲಾಧಿಕಾರಿ ಕಿರಣ್ ಪಾಟೀಲ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯ ಹೊರಗೆ ಹಲವಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು, ಸಲೈನ್ ಬಾಟಲಿಗಳನ್ನು ಮರಗಳಿಗೆ ಕೊಕ್ಕೆಯಿಂದ ನೇತುಹಾಕಲಾಗಿದೆ. ಸೋಮಠಾಣಾ ಮತ್ತು ಖಾಪರಖೇಡ್ ಗ್ರಾಮಗಳ ಭಕ್ತರು ರಾತ್ರಿ 10 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಪ್ರಸಾದವನ್ನು ಸೇವಿಸಿದ

ನಂತರ , ಅವರು ಹೊಟ್ಟೆ ನೋವು, ವಾಕರಿಕೆ ಮತ್ತು ವಾಂತಿಯಿಂದ ಬಳಲಿದ್ದಾರೆ. ಅಸ್ವಸ್ಥರಾದ ಜನರನ್ನು ಬೀಬಿ ಗ್ರಾಮದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಬೆಡ್‌ಗಳ ಕೊರತೆಯಿಂದಾಗಿ ಬಹುತೇಕ ರೋಗಿಗಳು ಆಸ್ಪತ್ರೆಯ ಹೊರಭಾಗದ ರಸ್ತೆಯಲ್ಲೇ ಚಿಕಿತ್ಸೆ ಪಡೆಯಬೇಕಾಯಿತು. ಮರಗಳಿಗೆ ಕೊಕ್ಕೆ ಹಾಕಿದ್ದ ಹಗ್ಗಗಳ ಮೇಲೆ ಸಲೈನ್ ಬಾಟಲಿಗಳನ್ನು ಅಳವಡಿಸಲಾಗಿತ್ತು.

ಮತ್ತಷ್ಟು ಓದಿ: ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು

ಇದು ಸೋಮಠಾಣಾದಲ್ಲಿ ಧಾರ್ಮಿಕ ಕಾರ್ಯಕ್ರಮದ ಆರನೇ ದಿನವಾಗಿತ್ತು. 400 ರಿಂದ 500 ಜನರಿಗೆ ಏಕಾದಶಿ ಪ್ರಸಾದ ವಿತರಿಸಲಾಯಿತು. ಎಲ್ಲ ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಬಹುತೇಕರು ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಾಟೀಲ್ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾದರೆ ಆಂಬ್ಯುಲೆನ್ಸ್ ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಪ್ರಸಾದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಮತ್ತು ವಿಚಾರಣೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ