ಪಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐದು ಮಂದಿ ಸಾವು

ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದಲ್ಲಿ ನಡೆದಿದೆ. ಸುದ್ದಿ ಸಂಸ್ಥೆ ಎಎನ್​ಐ ಪ್ರಕಾರ, ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐದು ಮಂದಿ ಸಾವು
ಬಾವಿ

Updated on: Apr 10, 2024 | 12:43 PM

ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದಲ್ಲಿ ನಡೆದಿದೆ. ಸುದ್ದಿ ಸಂಸ್ಥೆ ಎಎನ್​ಐ ಪ್ರಕಾರ, ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದ ಓರ್ವನನ್ನು ಪೊಲೀಸರ ತಂಡ ರಕ್ಷಿಸಿದೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್, ಒಬ್ಬರ ನಂತರ ಒಬ್ಬರಂತೆ ಪಾಳು ಬಾವಿಗೆ ಹಾರಿದ್ದಾರೆ, ಆರು ಜನರ ಪೈಕಿ ಐವರ ಮೃತ ದೇಹಗಳನ್ನು ರಕ್ಷಣಾ ತಂಡವು ಹೊರತೆಗೆದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಹಾಸನ: 80 ಅಡಿ ಪಾಳು ಬಾವಿಗೆ ಬದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಬಾವಿಯಲ್ಲಿ ಪ್ರಾಣಿಗಳ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಬಹಳ ದಿನಗಳಿಂದ ಈ ಬಾವಿಯನ್ನು ಮುಚ್ಚಲಾಗಿತ್ತು, ಅಲ್ಲಿ ಕಸ ಸುರಿಯಲಾಗುತ್ತಿತ್ತು. ಬೆಕ್ಕನ್ನು ರಕ್ಷಿಸಲು ಇಳಿದಿದ್ದ ಜನರು ವಿಷಾನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅಹಮದ್​ನಗರದ ವಾಡ್ಕಿ ಗ್ರಾಮದಲ್ಲಿ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ