AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥ

ಮಹಾರಾಷ್ಟ್ರದ ಲಾತೂರ್​ನಲ್ಲಿರುವ ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು ಎಂದು ಹೇಳಲಾಗುತ್ತಿದೆ. ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ ಮತ್ತು ಸೊಪ್ಪಿನ ಸಾರು ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥ
ಆಸ್ಪತ್ರೆImage Credit source: DNA
ನಯನಾ ರಾಜೀವ್
|

Updated on: Oct 06, 2024 | 11:40 AM

Share

ಮಹಾರಾಷ್ಟ್ರದ ಲಾತೂರ್​ನಲ್ಲಿರುವ ಸರ್ಕಾರಿ ಹಾಸ್ಟೆಲ್​ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು ಎಂದು ಹೇಳಲಾಗುತ್ತಿದೆ. ಪುರನ್ಮಲ್ ಲಾಹೋಟಿ ಸರ್ಕಾರಿ ಪಾಲಿಟೆಕ್ನಿಕ್‌ನ ಹಾಸ್ಟೆಲ್‌ನಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಅನ್ನ, ಚಪಾತಿ, ಬೆಂಡೆಕಾಯಿ ಕರಿ ಮತ್ತು ಸೊಪ್ಪಿನ ಸಾರು ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ವಿದ್ಯಾರ್ಥಿನಿಯರಿಗೆ ವಾಂತಿ ಶುರುವಾಗಿತ್ತು, ಮಾಹಿತಿ ಪಡೆದ ಕಾಲೇಜು ಪ್ರಾಂಶುಪಾಲರು ಸ್ಥಳಕ್ಕೆ ಧಾವಿಸಿ ಲಾತೂರ್​ನವಿಲಾಸ್‌ರಾವ್ ದೇಶಮುಖ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ಉದಯ್ ಮೋಹಿತೆ ಅವರಿಗೆ ಮಾಹಿತಿ ನೀಡಿದರು.

ಅಸ್ವಸ್ಥ ವಿದ್ಯಾರ್ಥಿಗಳನ್ನು ತಕ್ಷಣವೇ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಮಧ್ಯರಾತ್ರಿಯ ವೇಳೆಗೆ ಸುಮಾರು 50 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ ಮೋಹಿತೆ ತಿಳಿಸಿದ್ದಾರೆ. ಭಾನುವಾರ ಮುಂಜಾನೆ 3 ಗಂಟೆ ವೇಳೆಗೆ ಅವರಲ್ಲಿ 20 ಮಂದಿ ಡಿಸ್ಚಾರ್ಜ್ ಆಗಿದ್ದು, ಉಳಿದ 30 ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಯಾರ ಸ್ಥಿತಿಯೂ ಚಿಂತಾಜನಕವಾಗಿಲ್ಲ ಎಂದರು.

ಮತ್ತಷ್ಟು ಓದಿ: ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಸಂತ್ರಸ್ತ ವಿದ್ಯಾರ್ಥಿಗಳ ಪೋಷಕರಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ, ಘಟನೆಯ ಕುರಿತು ಶಿವಾಜಿನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮೇಲಾಗಿ ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಧಿಕಾರಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿದರು. ಮಾದರಿ ವರದಿ ಬಂದ ನಂತರ ಆಹಾರ ವಿಷಕ್ಕೆ ಕಾರಣ ತಿಳಿಯಲಿದೆ ಎಂದರು.

ಲಾತೂರ್‌ನ ಲೋಕಸಭಾ ಸದಸ್ಯ ಶಿವಾಜಿ ಕಾಲ್ಗೆ ಕೂಡ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಕಾಂಗ್ರೆಸ್ ಸಂಸದರು ಲಾತೂರ್ ಜಿಲ್ಲಾಧಿಕಾರಿ ವರ್ಷಾ ಠಾಕೂರ್ ಘುಗೆ ಅವರನ್ನು ಸಂಪರ್ಕಿಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್