AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡುತ್ತಿದ್ದಾರೆಂಬ ಅನುಮಾನದಲ್ಲಿ 77 ವರ್ಷದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿದ ಜನರು

ಮಹಾರಾಷ್ಟ್ರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಅಮರಾವತಿಯಲ್ಲಿ ಮಾಟಮಂತ್ರದ ಅನುಮಾನದ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಲಾಗಿದೆ. ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ, ಈ ತಿಂಗಳ ಆರಂಭದಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ಸಂತ್ರಸ್ತೆಯ ಮಗ ಮತ್ತು ಸೊಸೆ ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಾಟ-ಮಂತ್ರ ಮಾಡುತ್ತಿದ್ದಾರೆಂಬ ಅನುಮಾನದಲ್ಲಿ 77 ವರ್ಷದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿದ ಜನರು
Harassment
ಸುಷ್ಮಾ ಚಕ್ರೆ
|

Updated on: Jan 18, 2025 | 7:30 PM

Share

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಲಾಗಿದೆ. ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ದೂರಿನ ಪ್ರಕಾರ, ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ಗೊತ್ತಾಯಿತು. ಅವರು ಜನವರಿ 5ರಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ