ನಾಸಿಕ್: ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ, 8 ಮಂದಿ ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಈ ಘಟನೆ ನಡೆದಿದೆ. ಅಯ್ಯಪ್ಪ ದೇವಸ್ಥಾನದ ಬಳಿ ರಾತ್ರಿ 7.30ಕ್ಕೆ ಈ ಘಟನೆ ನಡೆದಿದೆ.
ಟೆಂಪೋದಲ್ಲಿ 16 ಮಂದಿ ಪ್ರಯಾಣಿಕರಿದ್ದರು, ನಿಫಾಡ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದರು. ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಸಾವು ಸಂಭವಿಸಿದೆ, ಕೆಲವರಿಗೆ ಗಂಭೀರ ಗಾಯಗಳಾಗಿವೆ.
ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದರು, ಗಾಯಾಳುಗಳು ಜಿಲ್ಲಾಸ್ಪತ್ರೆ ಮತ್ತು ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ, ಜನವರಿ 6 ರಂದು ನಾಸಿಕ್‌ನಲ್ಲಿ ಟ್ರಕ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಾಲಕಿ ಸೇರಿದಂತೆ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ನಂದಗಾಂವ್ ತಾಲೂಕಿನ ಮನ್ಮಾಡ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಬಳಿ ಅಪಘಾತ ಸಂಭವಿಸಿದೆ.
ಮತ್ತಷ್ಟು ಓದಿ: ತೆಲಂಗಾಣದಲ್ಲಿ ಎರಡು ಪ್ರತ್ಯೇಕ ಅಪಘಾತ, 9 ಮಂದಿ ಸಾವು
ಚಾಂದವಾಡದಿಂದ ಮನ್ಮಾಡ್‌ಗೆ ಮೇವು ಸಾಗಿಸುತ್ತಿದ್ದ ಟ್ರಕ್ ಮನ್ಮಾಡ್ ಎಪಿಎಂಸಿ ಬಳಿ ಬಂದಾಗ, ರಸ್ತೆಯಲ್ಲಿ ಕುಳಿತಿದ್ದ ನಾಯಿಗಳು ಇದ್ದಕ್ಕಿದ್ದಂತೆ ರಸ್ತೆಯ ಮಧ್ಯೆ ಬಂದವು.
STORY | Eight dead, several injured as tempo rams into truck carrying iron rods in Nashik
READ: https://t.co/p4vpYkcfR5
VIDEO:
(Full video available on PTI Videos – https://t.co/n147TvqRQz) pic.twitter.com/7BhVl1qVEt
— Press Trust of India (@PTI_News) January 12, 2025
ಪ್ರಾಣಿಗಳನ್ನು ರಕ್ಷಿಸಲು ಹೋಗಿ ಟ್ರಕ್ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಮನ್ಮಾಡ್ ಪಟ್ಟಣದ ಹನುಮಾನ್ ನಗರದ ನಿವಾಸಿಗಳಾದ ಸ್ವಾಮಿ ವಿವೇಕಾನಂದ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿಗಳಾದ ವೈಷ್ಣವಿ ಪ್ರವೀಣ್ ಕೇಕನ್ ಮತ್ತು ಆದಿತ್ಯ ಮುಖೇಶ್ ಸೋಲ್ಸೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ನಂತರ ಪೊಲೀಸರು ಟ್ರಕ್ ಚಾಲಕ ರಾಕೇಶ್ ದಾದಾಜಿ ಖೈರ್ನಾರ್ ಅವರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ