AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ರಾಯಗಢದಲ್ಲಿ ದುರಂತ; ಕೋಚಿಂಗ್ ಕ್ಲಾಸ್​ ಪಿಕ್​ನಿಕ್ ವೇಳೆ ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಸಾವು

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಪ್ರಸಿದ್ಧ 'ದೀವೆಯಾಗರ್' ಕಡಲತೀರದಲ್ಲಿ ಪಿಕ್​ನಿಕ್ ತೆರಳಿದ್ದ ಪುಣೆಯ ಖಾಸಗಿ ಕೋಚಿಂಗ್ ಅಕಾಡೆಮಿಯ 8 ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ಮೃತಪಟ್ಟ ದುರಂತ ಘಟನೆ ಸಂಭವಿಸಿದೆ. ಸಮುದ್ರದಿಂದ ಎಂಟೂ ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಪುಣೆಯ ಆಳಂದಿಯಲ್ಲಿರುವ 11 ಮತ್ತು 12ನೇ ತರಗತಿಯ 'ವಿನ್ನರ್ಸ್ ಅಕಾಡೆಮಿ'ಯ 25 ಹುಡುಗರು, 17 ಹುಡುಗಿಯರು ಮತ್ತು 6 ಶಿಕ್ಷಕರು ಸೇರಿದಂತೆ ಒಟ್ಟು 48 ಜನರ ತಂಡವು ಪ್ರವಾಸ ಬಂದಿತ್ತು.

ಮಹಾರಾಷ್ಟ್ರದ ರಾಯಗಢದಲ್ಲಿ ದುರಂತ; ಕೋಚಿಂಗ್ ಕ್ಲಾಸ್​ ಪಿಕ್​ನಿಕ್ ವೇಳೆ ಸಮುದ್ರದಲ್ಲಿ ಮುಳುಗಿ 8 ವಿದ್ಯಾರ್ಥಿಗಳು ಸಾವು
8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವುImage Credit source: TV9
ಸುಷ್ಮಾ ಚಕ್ರೆ
|

Updated on: Oct 01, 2026 | 8:50 PM

Share

ರಾಯಗಡ, ಅಕ್ಟೋಬರ್ 1: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಸಿದ್ಧ ‘ದೀವೆಯಾಗರ್’ ಕಡಲತೀರದಲ್ಲಿ ಇಂದು ಪಿಕ್ನಿಕ್ ತೆರಳಿದ್ದ 8 ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಂಟೂ ವಿದ್ಯಾರ್ಥಿಗಳ ದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ. ಇನ್ನೋ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ.

ಪುಣೆಯ ಆಳಂದಿಯಿಂದ ಪಿಕ್ನಿಕ್​ಗೆ ಆಗಮಿಸಿದ್ದ ಖಾಸಗಿ ಕೋಚಿಂಗ್ ಕ್ಲಾಸ್‌ನ 48 ಜನರ ತಂಡದಲ್ಲಿ 25 ಹುಡುಗರು, 17 ಹುಡುಗಿಯರು ಮತ್ತು 6 ಶಿಕ್ಷರಿದ್ದರು. ಮುಂಬೈನಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ದೀವೆಯಾಗರ್ ಕಡಲತೀರಕ್ಕೆ ಇವರೆಲ್ಲರೂ ತೆರಳಿದ್ದರು. ಈ ತಂಡದಲ್ಲಿದ್ದ ಕೆಲವು ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಲು ನೀರಿಗೆ ಇಳಿದಿದ್ದರು. ಆದರೆ, ಅವರಲ್ಲಿದ್ದ 8 ವಿದ್ಯಾರ್ಥಿಗಳು ನೀರಿನಿಂದ ಹೊರಬರದೆ ಮುಳುಗಿ ಮೃತಪಟ್ಟರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮತ್ತು ಅಧಿಕಾರಿಗಳು ಸುದೀರ್ಘ ಹುಡುಕಾಟ ನಡೆಸಿ ಎಂಟೂ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ಪುನರ್ಜನ್ಮದ ನಂಬಿಕೆಯಿಂದ ತಂದೆಯ ಮೃತದೇಹವನ್ನು 4 ವರ್ಷ ಫ್ರೀಜರ್‌ನಲ್ಲಿಟ್ಟ ಮಗಳು; ತಿಂಗಳಿಗೆ 1.6 ಲಕ್ಷ ವೆಚ್ಚ!

ಕಡಲತೀರದಲ್ಲಿದ್ದವರಲ್ಲಿ ಆತಂಕ ಮೂಡಿಸಿದ ಈ ದುರಂತಕ್ಕೆ ವಿದ್ಯಾರ್ಥಿಗಳು ಸಮುದ್ರದ ನೀರಿನ ಆಳ ಹಾಗೂ ಭೀಕರ ಅಲೆಗಳ ಸೆಳೆತವನ್ನು ಸರಿಯಾಗಿ ಅಂದಾಜಿಸಲು ಸಾಧ್ಯವಾಗದಿರುವುದೇ ಪ್ರಾಥಮಿಕ ಕಾರಣ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಬೋರ್ಲಿಪಂಚಾತನ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳ ನಂತರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುವುದು.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ