ಮಹಾರಾಷ್ಟ್ರ: ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯೊಂದರಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್‌ಗಳನ್ನು ಸೇವಿಸಿದ ನಂತರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳುImage Credit source: India Today
Follow us
ನಯನಾ ರಾಜೀವ್
|

Updated on: Aug 18, 2024 | 2:08 PM

ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್‌ಗಳನ್ನು ಸೇವಿಸಿದ ನಂತರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಕೇಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 8.30 ರ ಸುಮಾರಿಗೆ ಬಿಸ್ಕತ್ತು ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿತ್ತು ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯ ತಿಳಿದ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಕೂಡಲೇ ಶಾಲೆಗೆ ಆಗಮಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು. ವಿದ್ಯಾರ್ಥಿಗಳನ್ನು ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಲಾಗಿದೆ.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬಾಸಾಹೇಬ್ ಘುಘೆ ಮಾತನಾಡಿ, ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಬಿಸ್ಕತ್ತು ಸೇವಿಸಿದ 257 ವಿದ್ಯಾರ್ಥಿಗಳು ವಿಷಾಹಾರದ ಲಕ್ಷಣ ಕಂಡು ಬಂದಿದ್ದು, 153 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಕೆಲವರಿಗೆ ಚಿಕಿತ್ಸೆ ನೀಡಲಾಗಿದೆ. ಮತ್ತು ಮನೆಗೆ ಕಳುಹಿಸಲಾಗಿದೆ ಎಂದಿದ್ದಾರೆ.

ಮತ್ತಷ್ಟು ಓದಿ:  ಚಿತ್ರದುರ್ಗ: ಮದುವೆ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ

ತೀವ್ರ ರೋಗಲಕ್ಷಣಗಳನ್ನು ಹೊಂದಿರುವ ಏಳು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಘುಘೆ ಹೇಳಿದ್ದಾರೆ. ಶಾಲೆಯಲ್ಲಿ 296 ವಿದ್ಯಾರ್ಥಿಗಳಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಬಿಸ್ಕತ್ತಿನ ಬಗ್ಗೆ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ