Maharashtra: ತನ್ನನ್ನು ತಾನು ಮಣ್ಣಿನಲ್ಲಿ ಹೂತುಕೊಂಡು ವಿಚಿತ್ರವಾಗಿ ಪ್ರತಿಭಟನೆ ಮಾಡಿದ ರೈತ

ಮೂರು ವರ್ಷಗಳ ಹಿಂದೆ ಮಹಾರಾಷ್ಟ್ರದಲ್ಲಿ ಕಲ್ಯಾಣ ಯೋಜನೆಯಡಿ ಮಂಜೂರು ಮಾಡಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದಿರುವುದನ್ನು ವಿರೋಧಿಸಿ ರೈತರೊಬ್ಬರು ಮಣ್ಣಿನಲ್ಲಿ ಭಾಗಶಃ ತನ್ನನ್ನು ತಾನು ಮಣ್ಣಿನಲ್ಲಿ ಸಮಾಧಿ ಮಾಡಿಕೊಂಡು ವಿಚಿತ್ರವಾಗಿ ಪ್ರತಿಭಟನೆ ಮಾಡಿದ್ದಾರೆ.

Maharashtra: ತನ್ನನ್ನು ತಾನು ಮಣ್ಣಿನಲ್ಲಿ ಹೂತುಕೊಂಡು ವಿಚಿತ್ರವಾಗಿ ಪ್ರತಿಭಟನೆ ಮಾಡಿದ ರೈತ
ತನ್ನನ್ನು ತಾನು ಮಣ್ಣಿನಲ್ಲಿ ಸಮಾಧಿ ಮಾಡಿಕೊಂಡು ವಿಚಿತ್ರವಾಗಿ ಪ್ರತಿಭಟನೆ ಮಾಡಿದ ರೈತ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 03, 2023 | 5:53 PM

ಜಲ್ನಾ: ಮೂರು ವರ್ಷಗಳ ಹಿಂದೆ ಮಹಾರಾಷ್ಟ್ರದಲ್ಲಿ (Maharashtra) ಕಲ್ಯಾಣ ಯೋಜನೆಯಡಿ ಮಂಜೂರು ಮಾಡಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದಿರುವುದನ್ನು ವಿರೋಧಿಸಿ ರೈತರೊಬ್ಬರು ಮಣ್ಣಿನಲ್ಲಿ ಭಾಗಶಃ ತನ್ನನ್ನು ತಾನು ಮಣ್ಣಿನಲ್ಲಿ ಹೂತುಕೊಂಡು ವಿಚಿತ್ರವಾಗಿ ಪ್ರತಿಭಟನೆ ಮಾಡಿದ್ದಾರೆ. ಜಲ್ನಾ ಜಿಲ್ಲೆಯ ನಿವಾಸಿ ಸುನಿಲ್ ಜಾಧವ್ ಅವರಿಗೆ 2019 ರಲ್ಲಿ ಕರ್ಮವೀರ್ ದಾದಾಸಾಹೇಬ್ ಗಾಯಕ್ವಾಡ್ ಸಬ್ಲಿಕರಣ್ ಸ್ವಾಭಿಮಾನ್ ಯೋಜನೆಯಡಿ ಭೂಮಿ ಮಂಜೂರು ಮಾಡಲಾಗಿತ್ತು.

ದಾದಾಸಾಹೇಬ್ ಗಾಯಕವಾಡ ಯೋಜನೆಯಡಿ 2019ರಲ್ಲಿ ನಮಗೆ ಎರಡು ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಆದರೆ ಇನ್ನೂ ನಮ್ಮ ಕೈಗೆ ಕಾಗದಪತ್ರಗಳು ಬಂದಿಲ್ಲ. ಹೀಗಾಗಿ ನಾನೇ ಸಮಾಧಿ ಆಗುವೇ ಎಂದು ರೈತ ಹೇಳಿದರು. ಜಮೀನು ಸ್ವಾಧೀನ ಪಡಿಸಿಕೊಳ್ಳುವವರೆಗೂ ಪ್ರತಿಭಟನೆ ಕೈಬಿಡಲು ನಿರಾಕರಿಸಿದರು.

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಮತ್ತು ಜನರ ಮುಂದೆ ಇಡಲು ಆಗಾಗ್ಗೆ ಇಂತಹ ವಿನೂತನ ವಿಚಾರಗಳನ್ನು ಆಶ್ರಯಿಸುತ್ತಾರೆ. ಎರಡು ವರ್ಷಗಳ ಹಿಂದೆ ದೆಹಲಿಯ ಗಡಿಯಲ್ಲಿ ಕೇಂದ್ರವು ಈಗ ಹಿಂಪಡೆದಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ, ರೈತರು ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ವಿನೂತವಾಗಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿ:Farmers Protest ದೆಹಲಿಯ ಜಂತರ್​​ ಮಂತರ್​​ನಲ್ಲಿ ಮಹಾ ಪಂಚಾಯತ್; ರೈತರ ಬೇಡಿಕೆಗಳು ಏನು?

ಈ ವರ್ಷದ ಆರಂಭದಲ್ಲಿ ಕೇರಳದಲ್ಲಿ ಗುಂಡಿಗಳನ್ನು ವಿರೋಧಿಸಿ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ನೀರು ತುಂಬಿದ ಹಳ್ಳದಲ್ಲಿ ಸ್ನಾನ ಮಾಡಿದರು. ಕಳೆದ ವರ್ಷ, ಹೈದರಾಬಾದ್‌ನ ಆಸ್ಪತ್ರೆಯೊಂದರಲ್ಲಿ ತಮ್ಮ ಸಹೋದ್ಯೋಗಿಯೊಬ್ಬರ ಮೇಲೆ ಸೀಲಿಂಗ್ ಫ್ಯಾನ್ ಬಿದ್ದ ನಂತರ, ಸಾಂಕೇತಿಕ ಪ್ರತಿಭಟನೆಯಲ್ಲಿ, ಜೂನಿಯರ್ ವೈದ್ಯರು ಹೆಲ್ಮೆಟ್ ಧರಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Tue, 3 January 23

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ