Maharashtra Bus Accident: ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ
ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿ ಬಳಿ ಬಸ್(Bus) ಹಾಗೂ ಟ್ರಕ್(Truck) ನಡುವೆ ಅಪಘಾತ(Accident) ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿ ಬಳಿ ಬಸ್(Bus) ಹಾಗೂ ಟ್ರಕ್(Truck) ನಡುವೆ ಅಪಘಾತ(Accident) ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಗೋರೆಗಾಂವ್ನ ಸಂಸ್ಥೆಯೊಂದಕ್ಕೆ ಸೇರಿದ್ದಾಗಿದೆ. ಯಾವುದೋ ಕಾರ್ಯಕ್ರಮದ ನಿಮಿತ್ತ ಪುಣೆಗೆ ತೆರಳಿತ್ತು, ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಮಹಾರಾಷ್ಟ್ರದ ರಾಯಗಢದಲ್ಲಿ ಏಪ್ರಿಲ್ 15 ರಂದು ಬಸ್ ಒಂದು ಕಂದಕಕ್ಕೆ ಬಿದ್ದು, 12 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿದ್ದರು.
ಮತ್ತಷ್ಟು ಓದಿ: ಚನ್ನಪಟ್ಟಣ: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ; ಐವರ ಸಾವು
ಬಸ್ನಲ್ಲಿ 40-45 ಮಂದಿ ಪ್ರಯಾಣಿಸುತ್ತಿದ್ದರು, ಬಸ್ ಕಂದಕಕ್ಕೆ ಬಿದ್ದ ತಕ್ಷಣೆ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು, ಬಸ್ ಅನ್ನು ಮೇಲಕ್ಕೆತ್ತಲು ಕ್ರೇನ್ ಸಹಾಯ ಪಡೆಯಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ